Ad Widget .

ಕ್ರಿಕೆಟ್ ನಲ್ಲಿ ಹೊಸ ದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ

ಸಮಗ್ರ ನ್ಯೂಸ್: ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ರೋಹಿತ್ ಶರ್ಮಾ ಏಕದಿನ ವಿಶ್ವಕಪ್​ನಲ್ಲಿ ಸಾವಿರ ರನ್ ಪೂರೈಸಿದ್ದಾರೆ.

Ad Widget . Ad Widget .

ಇದರೊಂದಿಗೆ ಏಕದಿನ ವಿಶ್ವಕಪ್​ನಲ್ಲಿ ಅತ್ಯಂತ ವೇಗವಾಗಿ ಸಾವಿರ ರನ್ ಪೂರೈಸಿದ ವಿಶ್ವ ದಾಖಲೆಯನ್ನು ಹಿಟ್​​ಮ್ಯಾನ್ ಸರಿಗಟ್ಟಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಡೇವಿಡ್ ವಾರ್ನರ್ ಹೆಸರಿನಲ್ಲಿತ್ತು.

Ad Widget . Ad Widget .

ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ 19 ಇನಿಂಗ್ಸ್​ಗಳ ಮೂಲಕ ಏಕದಿನ ವಿಶ್ವಕಪ್​ನಲ್ಲಿ 1000 ರನ್ ಪೂರೈಸಿ ವಿಶ್ವ ದಾಖಲೆ ನಿರ್ಮಿಸಿದ್ದರು.

ಇದೀಗ ಹಿಟ್​ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಕೂಡ ಕೇವಲ 19 ಇನಿಂಗ್ಸ್​ಗಳ ಮೂಲಕ ಈ ಸಾಧನೆ ಮಾಡಿದ್ದಾರೆ. ಈ ಮೂಲಕ ವರ್ಲ್ಡ್​ ಕಪ್​ನಲ್ಲಿ ಅತ್ಯಂತ ವೇಗವಾಗಿ ಸಾವಿರ ರನ್ ಪೂರೈಸಿದ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ.

ಇದರ ಜೊತೆಗೆ ಏಕದಿನ ವಿಶ್ವಕಪ್​ನಲ್ಲಿ ಅತ್ಯಂತ ವೇಗವಾಗಿ ಸಾವಿರ ರನ್ ಪೂರೈಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ರೋಹಿತ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. ಸಚಿನ್ 20 ಇನಿಂಗ್ಸ್​ಗಳ ಮೂಲಕ 1000 ರನ್ ಪೂರೈಸಿ ದಾಖಲೆ ನಿರ್ಮಿಸಿದ್ದರು.

ಇದೀಗ ರೋಹಿತ್ ಶರ್ಮಾ 19 ಇನಿಂಗ್ಸ್​ಗಳ ಮೂಲಕ ಸಾವಿರ ರನ್ ಕಲೆಹಾಕಿ ಏಕದಿನ ವಿಶ್ವಕಪ್​ನಲ್ಲಿ ಅತೀ ವೇಗವಾಗಿ ಈ ಸಾಧನೆ ಮಾಡಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

Leave a Comment

Your email address will not be published. Required fields are marked *