ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರೈಲ್ವೆ ಹಳಿಗೆ ಉರುಳಿದ ಕಾಂಕ್ರೀಟ್ ಮಿಕ್ಸರ್| ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ

ಸಮಗ್ರ ನ್ಯೂಸ್: ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ರೈಲ್ವೇ ನಿಲ್ದಾಣದಲ್ಲಿ ಕಾಮಗಾರಿ ನಿರ್ವಹಿಸುತ್ತಿದ್ದ ಕಾಂಕ್ರೀಟ್ ಮಿಕ್ಸರ್ ಯಂತ್ರ ಚಾಲಕನ ನಿಯಂತ್ರಣ ತಪ್ಪಿ ಪ್ಲಾಟ್ ಪಾರ್ಮ್ ನಿಂದ ಕೆಳಗೆ ರೈಲ್ವೇ ಹಳಿಗೆ ಉರುಳಿ ಬಿದ್ದ ಘಟನೆ ನಡೆದಿದೆ.

. Ad Widget . Ad Widget

ಅದೃಷ್ಟವಶಾತ್ ಈ ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆ ಸಮಯದಲ್ಲಿ ರೈಲು ಬರದೆ ಇದ್ದ ಕಾರಣ ಯಾವುದೇ ಅವಘಡಗಳು ಸಂಭವಿಸಿಲ್ಲ. ರೈಲು ಆಗಮಿಸುವ ಮೊದಲು ಯಂತ್ರವನ್ನು ತೆರವು ಗೊಳಿಸಬೇಕಾದ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನ ಗಜಲಕ್ಷ್ಮೀ ಕ್ರೇನ್ ನವರು ಕಾರ್ಯ ಪ್ರವೃತರಾಗಿ ತೆರವು ಕಾರ್ಯ ನಿರ್ವಹಿಸಿದರು.

. Ad Widget . . Ad Widget . Ad Widget

ಕೋಟ್ಯಾಂತರ ರೂ ವೆಚ್ಚದಲ್ಲಿ ರೈಲ್ವೆ ನಿಲ್ದಾಣದ ಅಭಿವೃದ್ಧಿ ಕಾರ್ಯಗಳಿಗಾಗಿ ಇತ್ತೀಚೆಗೆ ಶಿಲಾನ್ಯಾಸ ನಡೆದಿದ್ದು, ಇದೀಗ ಕಾಮಗಾರಿ ಆರಂಭವಾಗಿದೆ. ರೈಲ್ವೆ ಪ್ಲಾಟ್ ಪಾರ್ಮ್ ನ ಸನಿಹದಲ್ಲಿ ಅಭಿವೃದ್ಧಿ ಕಾಮಗಾರಿಯನ್ನು ನಡೆಸುವ ಕಂಪೆನಿಯ ಕಾಂಕ್ರೀಟ್ ಮಿಕ್ಸರ್ ವಾಹನ ಚಾಲಕನ ನಿಯಂತ್ರಣ ಕಳೆದುಕೊಂಡು ಹಳಿಗೆ ಉರುಳಿ ಬಿದ್ದಿರುವುದು ಸಾರ್ವಜನಿಕ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದೆ.

ಅಜಾಗರೂಕತೆಯಿಂದ ಕಾಮಗಾರಿ ನಡೆಸಿದ ಸಂದರ್ಭದಲ್ಲಿ ರೈಲು ಅಪಘಾತಕ್ಕೆ ಕಾರಣವಾಗಬಹುದು, ಮತ್ತು ಬಹು ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *