ಸಮಗ್ರ ನ್ಯೂಸ್: ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸರ್ವೋತ್ತಮ ಗೌಡ ನೆಲ್ಯಾಡಿ ಅವರನ್ನು ಅ.10 ಆಯ್ಕೆ ಮಾಡಲಾಗಿದ್ದ ಆದೇಶಕ್ಕೆ ಕೆ.ಪಿ.ಸಿ.ಸಿ.ಅಧ್ಯಕ್ಷ ,ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅ.11ರಂದು ತಡೆ ನೀಡಿ ಆದೇಶ ಹೊರಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಪ್ರಸ್ತುತ ಅಧ್ಯಕ್ಷರಾಗಿದ್ದ ಸುಧೀರ್ ಕುಮಾರ್ ಶೆಟ್ಟಿ ಅವರೇ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.
ಕಡಬ ಬ್ಲಾಕ್ ಕಾಂಗ್ರೆಸ್ ನ ಸಾರಥ್ಯವನ್ನು ಮಾಜಿ. ಜಿ.ಪಂ ಸದಸ್ಯ ಸರ್ವೋತ್ತಮ ಗೌಡರಿಗೆ ವಹಿಸಲಾಗಿತ್ತು. ಈ ಕುರಿತಂತೆ ಅ.11ರಂದು ಆದೇಶ ಬಂದಿದ್ದು, ಅದರಂತೆ ಅಧಿಕಾರ ಹಸ್ತಾಂತರ ಕೂಡಾ ಮಾಡಲಾಗಿತ್ತು. ಆದರೆ ರಾಜಕೀಯ ಬೆಳವಣಿಗೆ ನಡೆದ ಬಳಿಕ ಇಂದು ಮತ್ತೆ ಅವರ ನೇಮಕಾತಿ ಆದೇಶಕ್ಕೆ ತಡೆ ನೀಡಲಾಗಿದೆ.
ಸದ್ಯದ ಮಟ್ಟಿಗೆ ಹಾಲಿ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಹೊಸ ಅಧ್ಯಕ್ಷರ ನೇಮಕಾತಿ ವಿಚಾರ ಮುಂದೂಡಲಾಗಿದೆ.