ಹವಾಮಾನ ವರದಿ| ಕರಾವಳಿ, ಒಳನಾಡಿನ ಹಲವೆಡೆ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಮಳೆಯಾಗಲಿದೆ.

. Ad Widget . Ad Widget . Ad Widget .

ಉಪ್ಪಿನಂಗಡಿಯಲ್ಲಿ ಹೆಚ್ಚು ಮಳೆಯಾಗಿದೆ, ಮದ್ದೂರು, ವಿರಾಜಪೇಟೆ, ಸರಗೂರು, ಚನ್ನಪಟ್ಟಣ, ಶಿಗ್ಗಾಂ, ಸಾಲಿಗ್ರಾಮ, ಹುಣಸೂರು, ಪೊನ್ನಂಪೇಟೆ, ಮಡಿಕೇರಿ, ಮಂಡ್ಯ, ಪುತ್ತೂರು, ಕೊಳ್ಳೇಗಾಲ, ನಾಪೋಕ್ಲು, ಮಂಡ್ಯ, ಮಡಿಕೇರಿ, ಪುತ್ತೂರು, ಮೂರ್ನಾಡು, ಕೊಟ್ಟಿಗೆಹಾರ, ಮಾಣಿ, ಮಂಗಳೂರು, ಬೆಂಗಳೂರು, ಶ್ರೀರಂಗಪಟ್ಟಣ, ಸುಳ್ಯ, ಭಾಗಮಂಡಲ, ಸೋಮವಾರಪೇಟೆ, ರಾಮನಗರದಲ್ಲಿ ಮಳೆಯಾಗಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಕಲಬುರ್ಗಿಯಲ್ಲಿ 34.7 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ವಿಜಯಪುರದಲ್ಲಿ 18.8 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರಾವಳಿಯ ಹಲವು ಕಡೆಗಳಲ್ಲಿ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯಾಗಲಿದೆ.

ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ 3-4 ಡಿಗ್ರಿ ಸೆಲ್ಸಿಯಸ್​ನಷ್ಟು ಮತ್ತು ಕೆಲವು ಕಡೆಗಳಲ್ಲಿ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಗರಿಷ್ಠ ತಾಪಮಾನ ಹೆಚ್ಚಾಗಲಿದೆ.

ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಮಳೆಯಾಗುವ ನಿರೀಕ್ಷೆ ಇದೆ.

ಎಚ್​ಎಎಲ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Leave a Comment

Your email address will not be published. Required fields are marked *