Ad Widget .

ಮಂಗಳೂರು: ಪದವಿ ವಿದ್ಯಾರ್ಥಿಗಳಿಗೆ ದಸರಾ ರಜೆ ನೀಡುವಂತೆ ವೇದವ್ಯಾಸ್ ಕಾಮತ್ ಆಗ್ರಹ

ಸಮಗ್ರ ನ್ಯೂಸ್:ನಾಡ ಹಬ್ಬ ದಸರಾ ರಜೆಯನ್ನು ಪದವಿ ಕಾಲೇಜುಗಳಿಗೂ ನೀಡುವಂತೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಸರ್ಕಾರಕ್ಕೆ ಆಗ್ರಹಿಸಿದ್ದಾರೆ

Ad Widget . Ad Widget .

ಮಂಗಳೂರಿನಲ್ಲಿ ಈಗಾಗಲೇ ಶಾಲಾ ಮಕ್ಕಳಿಗೆ ದಸರಾ ರಜೆ ನೀಡಲಾಗಿದೆ. ಪದವಿ ವಿದ್ಯಾರ್ಥಿಗಳಿಗೆ ರಜೆ ಘೋಷಿಸದಿರುವುದು ಹಬ್ಬದ ಸಂಭ್ರಮ ಸವಿಯಲು ಅಡ್ಡಿಯಾಗಿದೆ. ನಾಡಿನ ಪ್ರಮುಖ ಹಬ್ಬ ದಸರಾಗೆ ಪೂರಕವಾಗುವಂತೆ ಪದವಿ ವಿದ್ಯಾರ್ಥಿಗಳಿಗೂ ರಜೆ ನೀಡುವ ಬಗ್ಗೆ ಸರಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಆಗ್ರಹಿಸಿದ್ದಾರೆ.

Ad Widget . Ad Widget .

ದಸರಾವು ನಾಡಿನ ಅತ್ಯಂತ ಪ್ರಮುಖ ಹಬ್ಬವಾಗಿದ್ದು ಮಂಗಳೂರು ದಸರಾವು ಮೈಸೂರು ನಂತರ ಅತ್ಯಂತ ಜನಾಕರ್ಷಣೆ ಗಳಿಸಿರುವ ಹಬ್ಬವಾಗಿದೆ. ಹೀಗಾಗಿ ನವರಾತ್ರಿಯನ್ನು ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು, ಸೇರಿದಂತೆ ಎಲ್ಲರೂ ಸಂಭ್ರಮದಿಂದ ಆಚರಿಸುವಂತಾಗಲು ರಜೆ ನೀಡುವ ಬಗ್ಗೆ ಆದೇಶ ಹೊರಡಿಸಬೇಕೆಂದು ಉನ್ನತ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳ ಮೂಲಕ ಸರ್ಕಾರವನ್ನು ಆಗ್ರಹಿಸಿದರು.

ಹಿಂದಿನ ಸರ್ಕಾರದ ಅವಧಿಯಲ್ಲಿ ದಸರಾ ಹಬ್ಬದ ರಜೆಯಲ್ಲಿ ಉಂಟಾಗಿದ್ದ ವ್ಯತ್ಯಾಸವನ್ನು ಸರ್ಕಾರದ ಮಟ್ಟದಲ್ಲಿಯೇ ಮಾರ್ಪಾಡುಗೊಳಿಸುವಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಯಶಸ್ವಿಯಾಗಿದ್ದನ್ನು ಸ್ಮರಿಸಬಹುದಾಗಿದೆ.

Leave a Comment

Your email address will not be published. Required fields are marked *