ಸಮಗ್ರ ನ್ಯೂಸ್: ಸೌದಿ ಅರೆಬಿಯಾದ ಪವಿತ್ರಾ ನಗರ ಮೆಕ್ಕಾದಲ್ಲಿರುವ ಕಅಬಾ ಎದುರು ನಿಯಮ ಉಲ್ಲಂಘಿಸಿ ಭಾರತ್ ಜೋಡೋ ಯಾತ್ರೆಯ ಫಲಕ ಪ್ರದರ್ಶಿಸಿ ಜೈಲು ಪಾಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತ ರಾಝಾ ಖಾದ್ರಿ ಎಂಟು ತಿಂಗಳ ಜೈಲು ಶಿಕ್ಷೆಯ ಬಳಿಕ ಬಿಡುಗಡೆಯಾಗಿ ಭಾರತಕ್ಕೆ ಮರಳಿದ್ದಾರೆ.
ಮಧ್ಯಪ್ರದೇಶದ ಝಾನ್ಸಿ ಜಿಲ್ಲೆಯ ನಿವಾಸಿ ಖಾದ್ರಿ ಎಂಬಾತನ್ನ ಸೌದಿ ಪೊಲೀಸರು ಬಂಧಿಸಿದ್ದರು. ಇದೀಗ ಜೈಲಿನಲ್ಲಿ ತಾವು ಅನುಭವಿಸಿದ ಯಾತನೆಯನ್ನು ಕಾಂಗ್ರೆಸ್ ಕಾರ್ಯಕರ್ತ ಹೇಳಿಕೊಂಡಿದ್ದಾರೆ.
ಕಳೆದ ವರ್ಷ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ ಅರಂಭಿಸಿದ್ದರು. ಈ ವೇಳೆ ಅವರನ್ನು ಬೆಂಬಲಿಸುವ ಸಲುವಾಗಿ ಭಾರತ್ ಜೋಡೋ ಯಾತ್ರೆಯ ಫಲಕವನ್ನು ಕಅಭಾದಲ್ಲಿ ತೋರಿಸಿ ಫೋಟೋವನ್ನು ತೆಗೆಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ. ಆದರೆ ಎರಡು ದಿನಗಳ ಆತ ತಂಗಿದ್ದ ಹೋಟೆಲ್ ನಲ್ಲಿ ಅವರನ್ನು ಸೌದಿ ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದರು.ಇಸ್ಲಾಮಿಕ್ ಪವಿತ್ರ ಸ್ಥಳಗಳು ಸೇರಿದಂತೆ ಸೌದಿ ಅರೇಬಿಯಾದಲ್ಲಿ ಯಾವುದೇ ರೀತಿಯ ಧ್ವಜ ಮತ್ತು ಫಲಕವನ್ನು ಪ್ರದರ್ಶಿಸುವುದು ಕಾನೂನುಬಾಹಿರವಾಗಿದ್ದರಿಂದ ಅವರನ್ನು ಬಂಧಿಸಲಾಗಿತ್ತು.
ಭಾರತ್ ಜೋಡೋ ಯಾತ್ರೆಯ ಪೋಸ್ಟರ್ ಅನ್ನು ಪ್ರದರ್ಶಿಸಿಸಿ ಸೌದಿ ಅರೇಬಿಯಾದ ಕಾನೂನು ಉಲ್ಲಂಘನೆ ಮಾಡಿದ್ದಕ್ಕೆ ರಾಝಾರನ್ನ ಬಂಧಿಸಲಾಗಿತ್ತು. 2 ತಿಂಗಳ ಕಾಲ ಎರಡು ತಿಂಗಳ ವಿಚಾರಣೆ ನಡೆಸಿದ್ದ ಪೊಲೀಸರು ಶಿಕ್ಷೆಯಾಗಿ 99 ಛಡಿ ಏಟು ಹೊಡೆದಿದ್ದರು ಎಂದು ತಿಳಿದುಬಂದಿದೆ.