Ad Widget .

ಹವಾಮಾನ ವರದಿ: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾದರೆ, ಒಳನಾಡಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

Ad Widget . Ad Widget .

ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಚದುರಿದ ಮಳೆ ಸುರಿಯಲಿದೆ. ಉಳಿದಂತೆ ತುಮಕೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಾವಣಗೆರೆಯಲ್ಲಿ ಒಣ ಹವೆ ಇರಲಿದೆ.

Ad Widget . Ad Widget .

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗದಗ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಲಘು ಮಳೆ ಬೀಳಲಿದೆ. ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ.

ಮಲೆನಾಡಿನ ಹಾಸನ ಮತ್ತು ಕೊಡಗು, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ.

ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಕ್ಟೋಬರ್ 13 ರಂದು ಶುಕ್ರವಾರ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಕರಾವಳಿಯ ಉತ್ತರ ಕನ್ನಡ ಭಾಗದಲ್ಲಿ 7 ಸೆ.ಮೀ.ವರೆಗೆ ಮಳೆಯಾಗುವ ಸಂಭವ ಇರುವುದರಿಂದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

Leave a Comment

Your email address will not be published. Required fields are marked *