ಸಮಗ್ರ ನ್ಯೂಸ್: ಸುಮಾರು ನಲವತ್ತು ವರ್ಷಗಳ ನಂತರ ಭಾರತ ಆಯೋಜಿಸುತ್ತಿರುವ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ 141ನೇ ಅಧಿವೇಶನವನ್ನು ಮುಂಬೈನ ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.
ಈ ಅಧಿವೇಶನವು ಒಲಂಪಿಕ್ ಕ್ರೀಡಾಕೂಟಗಳ ಭವಿಷ್ಯದ ಬಗ್ಗೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದು, ಈ ಅಧಿವೇಶನದಲ್ಲಿ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಸದಸ್ಯರು ಭಾಗವಹಿಸಲಿದ್ದಾರೆ, ಸುಮಾರು 40 ವರ್ಷಗಳ ನಂತರ ಭಾರತವು ಎರಡನೇ ಬಾರಿ ಆಯೋಜಿಸುತ್ತಿರುವ ಸಭೆ ಇದಾಗಿದೆ.
ಈ ಅಧಿವೇಶನವು ಜಾಗತಿಕ ಸಹಕಾರವನ್ನು ಉತ್ತೇಜಿಸಲು, ಕ್ರೀಡಾ ಉತ್ಕೃಷ್ಟತೆಯನ್ನು ಆಚರಿಸಲು ಮತ್ತು ಶ್ರೇಷ್ಠತೆಯ ಒಲಿಂಪಿಕ್ ಆದರ್ಶಗಳನ್ನು ಮುಂದುವರಿಸಲು ರಾಷ್ಟ್ರದ ಸಮರ್ಪಣೆಯನ್ನು ಸಾಕಾರಗೊಳಿಸುತ್ತದೆ ಎಂದು ಪ್ರಧಾನಿ ಕಚೇರಿ (ಪಿಎಂಒ) ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.