Ad Widget .

ಅಮೇರಿಕಾದಲ್ಲಿ ಅಂಬೇಡ್ಕರ್ ಪ್ರತಿಮೆ/ ವಿದೇಶದಲ್ಲಿ ಅತೀ ಎತ್ತರದ ಅಂಬೇಡ್ಕರ್ ಪ್ರತಿಮೆ ಇಂದು ಉದ್ಘಾಟನೆ

ಸಮಗ್ರ ನ್ಯೂಸ್: ಭಾರತದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ 19 ಅಡಿ ಎತ್ತರದ ಪ್ರತಿಮೆಯನ್ನು ಇಂದು ಉದ್ಘಾಟನೆ ಮಾಡಲಾಗಿದೆ. ಇದು ವಿದೇಶದಲ್ಲಿ ಅನಾವರಣಗೊಳಿಸಲಾದ ಅಂಬೇಡ್ಕರ್ ಅವರ ಅತಿ ಎತ್ತರದ ಪ್ರತಿಮೆ ಎಂಬ ದಾಖಲೆಗೆ ಪಾತ್ರವಾಗಿದೆ.

Ad Widget . Ad Widget .

ಖ್ಯಾತ ಕಲಾವಿದ ಮತ್ತು ಶಿಲ್ಪಿ ರಾಮ್ ಸುತಾರ್ ಅವರು ಈ ಪ್ರತಿಮೆಯನ್ನು ನಿರ್ಮಿಸಿದ್ದಾರೆ. ಅವರು ಗುಜರಾತ್‌ನಲ್ಲಿ ಸರ್ದಾರ್ ಪಟೇಲ್ ಅವರ ಪ್ರತಿಮೆಯನ್ನು ನಿರ್ಮಿಸಿದ್ದಾರೆ. ಇದನ್ನು “ಏಕತೆಯ ಪ್ರತಿಮೆ’ ಎಂದು ಕರೆಯಲಾಗುತ್ತದೆ

Ad Widget . Ad Widget .

ಇಂದು ನಡೆದ ಉದ್ಘಾಟನಾ ಸಮಾರಂಭದಲ್ಲಿ ಅಮೆರಿಕದ ವಿವಿಧ ಭಾಗಗಳಿಂದ ಬಂದಿದ್ದ 500ಕ್ಕೂ ಹೆಚ್ಚು ಅನಿವಾಸಿ ಭಾರತೀಯರು ಭಾಗವಹಿಸಿದ್ದರು. ‘ಜೈ ಭೀಮ್’ ಎಂದು ಘೋಷಣೆಗಳನ್ನು ಕೂಗಿ ಸಂಭ್ರಮಿಸಿದ್ದಾರೆ.

ಅಮೇರಿಕಾದ ಅಕೋಕೀಕ್ ನಗರದ 13 ಎಕರೆ ವಿಸ್ತೀರ್ಣ ಪ್ರದೇಶದಲ್ಲಿ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿದ್ದು, ಇದು ಶ್ವೇತ ಭವನದಿಂದ 21 ಕಿ.ಮೀ ದೂರದಲ್ಲಿದೆ.

ಭಾರತದ ಹೈದರಾಬಾದ್‌ನಲ್ಲಿ ಅನಾವರಣಗೊಂಡ 125 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆಯು ವಿಶ್ವದಲ್ಲಿಯೇ ಅತಿ ಎತ್ತರದ್ದಾಗಿದೆ. ಸಂವಿಧಾನ ಕರ್ತೃ ಅಂಬೇಡ್ಕರ್ ಅವರ ಜೀವನ ಸಂದೇಶವನ್ನು ಸಾರಲು ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ

Leave a Comment

Your email address will not be published. Required fields are marked *