ಬಿಜೆಪಿ – ಜೆಡಿಎಸ್ ಮೈತ್ರಿ/ ಜೆಡಿಎಸ್ ರಾಜ್ಯಾಧ್ಯಕ್ಷ ಸಿ. ಎಂ. ಇಬ್ರಾಹಿಂ ಸೋಮವಾರ ಪ್ರತ್ಯೇಕ ಸಭೆ

ಸಮಗ್ರ ನ್ಯೂಸ್: ಬಿಜೆಪಿ ಜತೆಗೆ ಮೈತ್ರಿ ಹಿನ್ನಲೆಯಲ್ಲಿ ಜೆಡಿಎಸ್ ನಲ್ಲಿ ಹಲವಾರು ಬೆಳವಣಿಗೆಗಳು ಕಂಡುಬರುತ್ತಿದ್ದು, ಇದೀಗ ಮೈತ್ರಿ ವಿರೋಧಿಸಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸೋಮವಾರ ಪ್ರತ್ಯೇಕ ಸಭೆ ನಡೆಸಲಿದ್ದಾರೆ.

Ad Widget ... ..

ಬಿಜೆಪಿ ಜೊತೆಗೆ ಮೈತ್ರಿ ಘೋಷಣೆ ಆದಂದಿನಿಂದ ಜೆಡಿಎಸ್ ಪಾಳೆಯದಲ್ಲಿ ಅಲ್ಪಸಂಖ್ಯಾತ ಮುಖಂಡರ ರಾಜೀನಾಮೆ ಪರ್ವ ಶುರುವಾಗಿದೆ. ಕೆಲವು ಶಾಸಕರು ಮೈತ್ರಿ ಬಗ್ಗೆ ತೀವ್ರ ಅಪಸ್ವರ ತೆಗೆದಿದ್ದು, ಇನ್ನು ಕೆಲವರು ಕಾದುನೋಡುವ ತಂತ್ರ ಅನುಸರಿಸುತ್ತಿದ್ದಾರೆ.

Ad Widget

ಈ ನಡುವೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಮೈತ್ರಿ ವಿರೋಧಿಸುವ ಶಾಸಕರು, ಮಾಜಿ ಶಾಸಕರು, ಪಕ್ಷದ ಮುಖಂಡರ ಜತೆ ಚರ್ಚಿಸಲು ಅ.16 ರಂದು ಸಭೆ ನಡೆಸಲಿದ್ದಾರೆ. ಇದರಿಂದಾಗಿ ಬಿಜೆಪಿ ಜೆಡಿಎಸ್ ಮೈತ್ರಿ ಮತ್ತಷ್ಟು ಗೊಂದಲಕ್ಕೆ ಸಿಲುಕುವ ಸಾಧ್ಯತೆಗಳು ಹೆಚ್ಚಾಗಲಿವೆ

Leave a Comment

Your email address will not be published. Required fields are marked *