ಸಮಗ್ರ ನ್ಯೂಸ್: ರಾಜ್ಯದಲ್ಲಿ ಬೆಲೆ ಏರಿಕೆಯ ಬಿಸಿ ಎಲ್ಲಾ ಕ್ಷೇತ್ರಗಳನ್ನು ತಲುಪುತ್ತಿದ್ದು, ಇದೀಗ ಕಾವೇರಿ ನೀರು ಕೂಡ ದುಬಾರಿಯಾಗುವ ಸಾಧ್ಯತೆ ಕಂಡುಬರುತ್ತಿದೆ
ಬಿಡಬ್ಲ್ಯೂಎಸ್‌ಎಸ್‌ಬಿ ನೀರಿನ ದರ ಏರಿಕೆಗೆ ಪ್ರಸ್ತಾವನೆಯನ್ನು ಸಲ್ಲಿಸಿದ್ದು, ನೀರಿನ ದರ ಏರಿಕೆಗೆ ಜಲಮಂಡಳಿ ಮುಂದಾಗಿದೆ. 9 ವರ್ಷಗಳ ನಂತರ ನೀರಿನ ದರ ಏರಿಕೆ ಆಗುವ ಸಾಧ್ಯತೆ ಇದೆ.
ಆದಾಯ ಕುಸಿತದ ಪರಿಣಾಮ ಆರ್ಥಿಕ ವೆಚ್ಚವನ್ನು ಸರಿದೂಗಿಸುವ ನಿಟ್ಟಿನಲ್ಲಿ ಜಲಮಂಡಳಿ ನೀರಿನ ಬೆಲೆ ಹೆಚ್ಚಳಕ್ಕೆ ಮುಂದಾಗಿದ್ದು, ಗೃಹ ಬಳಕೆ ಶೇ.30 ರಿಂದ 40, ವಾಣಿಜ್ಯ ಬಳಕೆ ಶೇ.45ರಷ್ಟು ದರ ಹೆಚ್ಚಳ ಮಾಡುವ ಸಾಧ್ಯತೆಯಿದೆ.