Ad Widget .

ಪುತ್ತೂರು: ಈಜಲು ಹೋಗಿ ಕಣ್ಮರೆಯಾಗಿದ್ದ ಬಾಲಕ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ಸ್ನೇಹಿತರೊಂದಿಗೆ ಹೊಳೆಗೆ ಈಜಲು ಇಳಿದ ವೇಳೆ ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದ ಕೆಯ್ಯೂರು ಗ್ರಾಮದ ಎರಕ್ಕಲದ ಬಾಲಕನ ಮೃತದೇಹ ಇಂದು(ಅ16) ಬೆಳಗ್ಗೆ ಪತ್ತೆಯಾಗಿದೆ.

Ad Widget . Ad Widget .

ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಹಾಜಿ ಎಂಬವರ ಪುತ್ರ ತಸ್ಲೀಮ್ (17) ಮೃತ ಬಾಲಕ. ಇವರು ಸುಳ್ಯದ ಅರಂತೋಡಿನಲ್ಲಿರುವ ತನ್ನ ಅಜ್ಜಿ ಮನೆಯಲ್ಲಿದ್ದು, ಅಲ್ಲಿಂದ ಪಿಯು ಕಾಜೇಜಿಗೆ ಹೋಗುತ್ತಿದ್ದರು. ಕಾಲೇಜಿಗೆ ರಜೆ ಇದ್ದ ಕಾರಣ ಮನೆಗೆ ಬಂದಿದ್ದರು ಎನ್ನಲಾಗಿದೆ.

Ad Widget . Ad Widget .

ತಸ್ಲೀಮ್ ರವಿವಾರ ಸಂಜೆ ಸ್ನೇಹಿತರೊಂದಿಗೆ ಎರಕ್ಕಲ ಸಮೀಪದ ಗೌರಿ ಹೊಳೆಗೆ ಈಜಲು ತೆರಳಿದ್ದ ವೇಳೆ ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದರು. ಈ ವಿಷಯ ತಿಳಿಯುತ್ತಲೇ ಸ್ಥಳೀಯರು, ಮುಳುಗು ತಜ್ಞರು ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ ಮತ್ತೆ ಹುಡುಕಾಟ ಮುಂದುವರಿಸಿದಾಗ ತಸ್ಲೀಮ್ ಈಜಲು ತೆರಳಿದ್ದ ಸ್ಥಳದ ಸನಿಹವೇ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *