ಚೈತ್ರಾ ವಂಚನೆ ಪ್ರಕರಣ| ಮೂರನೇ ಆರೋಪಿ ಹಾಲಶ್ರೀ ಜಾಮೀನು ಅರ್ಜಿ ವಜಾ

ಸಮಗ್ರ ನ್ಯೂಸ್:ಕೋಟ್ಯಾಂತರ ರೂ. ವಂಚನೆ ಪ್ರಕರಣದ ಮೂರನೇ ಆರೋಪಿ ಹಾಲಶ್ರೀ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸಿಸಿಹೆಚ್ 57ನೇ ನ್ಯಾಯಾಲಯ ವಜಾಗೊಳಿಸಿದೆ.

Ad Widget ... ..

ಚೈತ್ರಾ ವಂಚನೆ ಪ್ರಕರಣದಲ್ಲಿ ತನ್ನ ಹೆಸರು ಕೇಳಿಬರುತ್ತಿದ್ದಂತೆಯೇ ಅಜ್ಞಾತ ಸ್ಥಳಕ್ಕೆ ತೆರಳಿದ್ದ ಹಾಲಶ್ರೀ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

Ad Widget

ಇನ್ನು ವಂಚನೆ ಪ್ರಕರಣದಲ್ಲಿ ಹಾಲಶ್ರೀ ವಿರುದ್ಧ ಯಾವುದೇ ಆರೋಪವಿಲ್ಲ. ಚೈತ್ರಾ ವಿರುದ್ಧ ಮಾತ್ರ ವಂಚನೆ ಆರೋಪವಿದೆ. ಹೀಗಾಗಿ ಅಭಿನವ ಹಾಲಶ್ರೀಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಹಾಲಶ್ರೀ ಪರ ವಕೀಲರು ಮನವಿ ಮಾಡಿದ್ದರು. ಆದರೆ ಹಾಲಶ್ರೀಗೆ ನಿರೀಕ್ಷಣಾ ಜಾಮೀನು ನೀಡದಂತೆ ವಂಚನೆಗೆ ಒಳಗಾದ ಉದ್ಯಮಿ ಗೋವಿಂದಬಾಬು ಪೂಜಾರಿ ಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.

Leave a Comment

Your email address will not be published. Required fields are marked *