ಉಡುಪಿ: ಅಪರಿಚಿತ ವ್ಯಕ್ತಿ ಮೃತದೇಹ ಪತ್ತೆ| ಕೊಲೆ ಶಂಕೆ

ಸಮಗ್ರ ನ್ಯೂಸ್: ಉಡುಪಿಯ ಕರಾವಳಿ ಹೋಟೆಲಿನ ಆವರಣದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದು, ಮೇಲ್ನೋಟಕ್ಕೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.

Ad Widget ... ..

ಈ ಬಗ್ಗೆ ಮಾಹಿತಿ ಪಡೆದ ಸಮಾಜ ಸೇವಕ ವಿಶು ಶೆಟ್ಟಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸ್ ಅಧಿಕಾರಿ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಕೆಎಂಸಿ ಮಣಿಪಾಲ ಹಾಗೂ ಮಂಗಳೂರಿನ ನ್ಯಾಯ ವಿಜ್ಞಾನ ಪ್ರಯೋಗಾಲಯದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ad Widget

ಹರಿತವಾದ ಆಯುಧದಿಂದ ವ್ಯಕ್ತಿಯ ಬಲ ಕೈ ಕಡಿದಿದ್ದು ತೀವ್ರ ರಕ್ತಸ್ರಾವದಿಂದ ಮೃತಪಟ್ಟಂತೆ ಮೇಲ್ನೋಟಕ್ಕೆ ಕಂಡುಬಂದಿದೆ.

ಉಡುಪಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಮೃತ ದೇಹವನ್ನು ಕೆಎಂಸಿ ಶವಾಗಾರದಲ್ಲಿ ಇಡಲಾಗಿದೆ. ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು, ವಿಶು ಶೆಟ್ಟಿ ಹಾಗೂ ರಾಮದಾಸ್ ಪಾಲನ್ ಕಾನೂನು ಪ್ರಕ್ರಿಯೆಗೆ ಸಹಕರಿಸಿದ್ದಾರೆ. ಸಂಬಂಧಿಕರು ಅಥವಾ ಸಂಬಂಧ ಪಟ್ಟವರು ಠಾಣೆಗೆ ಸಂಪರ್ಕಿಸುವಂತೆ ಕೋರಲಾಗಿದೆ.

Leave a Comment

Your email address will not be published. Required fields are marked *