Ad Widget .

ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಇಲ್ಲ| ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಸಮಗ್ರ ನ್ಯೂಸ್: ದೇಶದಲ್ಲಿ ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದ್ದು, ಐವರು ಜಡ್ಜ್‌ಗಳ ಸಾಂವಿಧಾನಿಕ ಪೀಠವು ಈ ಮಹತ್ವದ ತೀರ್ಪು ನೀಡಿದೆ.

Ad Widget . Ad Widget .

ಭಾರತದಲ್ಲಿ ಸಲಿಂಗ ವಿವಾಹಗಳನ್ನು ಕಾನೂನು ಬದ್ಧಗೊಳಿಸುವ ಬಗ್ಗೆ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ನೇತೃತ್ವದ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್ ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿಎಸ್ ನರಸಿಂಹ ಅವರನ್ನೊಳಗೊಂಡ ಐವರು ಜಡ್ಜ್‌ಗಳ ಸಾಂವಿಧಾನಿಕ ಪೀಠವು 10 ದಿನಗಳ ವಿಚಾರಣೆಯ ನಂತರ ಈ ವರ್ಷ ಮೇ 11 ರಂದು ತೀರ್ಪನ್ನು ಕಾಯ್ದಿರಿಸಿತ್ತು.

Ad Widget . Ad Widget .

ಸಾಂವಿಧಾನಿಕ ಪೀಠ ಸತತ ಹತ್ತು ದಿನಗಳ ಕಾಲ ವಿಚಾರಣೆ ನಡೆಸಿ ಕೇಂದ್ರ ಸರ್ಕಾರ, ಅರ್ಜಿದಾರರು ಹಾಗೂ ಸಂಬಂಧಪಟ್ಟ ಎಲ್ಲ ಪಕ್ಷಗಾರರ ವಾದಗಳನ್ನು ಆಲಿಸಿದೆ. ಬಳಿಕ ಹಿರಿಯ ವಕೀಲರಾದ ಎ.ಎಂ.ಸಿಂಘ್ವಿ, ರಾಜು ರಾಮಚಂದ್ರನ್‌, ಕೆ.ವಿ.ವಿಶ್ವನಾಥನ್‌, ಆನಂದ್‌ ಗ್ರೋವರ್‌, ಹಾಗೂ ಸೌರಭ್‌ ಕೃಪಾಲ್‌ ಅವರ ವಾದಗಳನ್ನೂ ಆಲಿಸಿದೆ.

ಭಾರತದಲ್ಲಿ ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ಕೋರಿ ಹಾಕಲಾಗಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಸಾಂವಿಧಾನಿಕ ಪೀಠ ರಚನೆ ಮಾಡಿತ್ತು. “ನಮ್ಮಲ್ಲಿ ನಿರಂತರವಾಗಿ ಉಳಿದಿರುವ ಸಾಂವಿಧಾನಿಕ ಸಿದ್ಧಾಂತವಿದೆ. ನಾವು ಶಾಸನವನ್ನು ಮಾಡಲು ಸಾಧ್ಯವಿಲ್ಲ, ನಾವು ನೀತಿಯನ್ನು ರೂಪಿಸಲು ಸಾಧ್ಯವಿಲ್ಲ, ನಾವು ನೀತಿ ರಚನೆಯ ಕ್ಷೇತ್ರವನ್ನು ಪ್ರವೇಶಿಸಲು ಸಾಧ್ಯವಿಲ್ಲ” ಎಂದು ಪೀಠದ ಭಾಗವಾಗಿದ್ದ ನ್ಯಾಯಮೂರ್ತಿ ಎಸ್ ಆರ್ ಭಟ್ ತಿಳಿಸಿದ್ದರು.

ಮದುವೆಯು ಹಲವಾರು ಹಕ್ಕುಗಳು, ಸವಲತ್ತುಗಳು ಮತ್ತು ಕಟ್ಟುಪಾಡುಗಳನ್ನು “ಕಾನೂನಿಂದ ಪಾಲಿಸಲಾಗಿದೆ ಮತ್ತು ರಕ್ಷಿಸುತ್ತದೆ” ಎಂದು ಅರ್ಜಿಗಳು ವಾದಿಸಿದ್ದವು. ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ದೆಹಲಿ ಆಯೋಗವು (DCPCR) ಈ ರೀತಿಯ ಮದುವೆಗಳನ್ನು ಗುರುತಿಸುವಂತೆ ತಿಳಿಸಿದೆ. ಮಕ್ಕಳ ಮೇಲೆ ಇಂತಹ ವಿವಾಹಗಳ ಪ್ರಭಾವದ ಕುರಿತು ನ್ಯಾಯಾಲಯಕ್ಕೆ ಸಹಾಯ ಮಾಡಲು ಮಧ್ಯಸ್ಥಿಕೆ ಅರ್ಜಿಯನ್ನು ಸಲ್ಲಿಕೆ ಮಾಡಿತ್ತು.

ಮತ್ತೊಂದೆಡೆ, ಕೇಂದ್ರ ಸರ್ಕಾರ, ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂಸ್ಥೆ ಎನ್‌ಸಿಪಿಸಿಆರ್ ಮತ್ತು ಜಮಿಯತ್-ಉಲಾಮಾ-ಐ-ಹಿಂದ್ ಎಂಬ ಇಸ್ಲಾಮಿಕ್ ವಿದ್ವಾಂಸರ ಮಂಡಳಿ ಸೇರಿದಂತೆ ಪ್ರತಿವಾದಿಗಳು ಅರ್ಜಿಗಳನ್ನು ವಿರೋಧಿಸಿದರು.

Leave a Comment

Your email address will not be published. Required fields are marked *