Ad Widget .

ಗಾಜಾದಲ್ಲಿ ಇಸ್ರೇಲ್ ನಿಂದ ಭೀಕರ ಹತ್ಯಾಕಾಂಡ| ಆಸ್ಪತ್ರೆ ಮೇಲೆ ದಾಳಿ; 500ಕ್ಕೂ ಹೆಚ್ಚು ಸಾವು

ಸಮಗ್ರ ನ್ಯೂಸ್: ಹಮಾಸ್ ಬಂಡುಕೋರರನ್ನು ಗುರಿಯಾಗಿಸಿಕೊಂಡು ಗಾಜಾ ಮೇಲೆ ದಾಳಿ ಮುಂದುವರೆಸಿದ ಇಸ್ರೇಲ್ ಭೀಕರ ಹತ್ಯಾಕಾಂಡ ನಡೆಸಿ 500ಕ್ಕೂ ಹೆಚ್ಚು ಅಮಾಯಕರನ್ನು ಕೊಂದಿದೆ.

Ad Widget . Ad Widget .

ಗಾಯಾಳುಗಳು ಮತ್ತು ಇತರ ಪ್ಯಾಲೆಸ್ಟೀನಿಯಾದವರಿಂದ ತುಂಬಿದ ಗಾಜಾ ನಗರದ ಆಸ್ಪತ್ರೆಯಲ್ಲಿ ಮಂಗಳವಾರ ಭಾರಿ ಸ್ಫೋಟ ಸಂಭವಿಸಿದ್ದು, 500ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ನಡೆಸುತ್ತಿರುವ ಆರೋಗ್ಯ ಸಚಿವಾಲಯ ತಿಳಿಸಿದೆ.

Ad Widget . Ad Widget .

ಹಮಾಸ್ ಇಸ್ರೇಲಿ ವೈಮಾನಿಕ ದಾಳಿಯನ್ನು ದೂಷಿಸಿದೆ. ಆದರೆ ಇಸ್ರೇಲಿ ಮಿಲಿಟರಿ ಇದು ಪ್ಯಾಲೆಸ್ಟೀನಿಯನ್ ಉಗ್ರಗಾಮಿಗಳು ತಪ್ಪಾಗಿ ಹಾರಿಸಿದ ರಾಕೆಟ್ ದಾಳಿ ಎಂದು ಹೇಳಿದೆ. ದಾಳಿಯಲ್ಲಿ ಕನಿಷ್ಠ 500 ಜನರು ಸಾವನ್ನಪ್ಪಿದ್ದಾರೆ ಎಂದು ಸಚಿವಾಲಯ ತಿಳಿಸಿದೆ. ಅಲ್-ಅಹ್ಲಿ ಅರಬ್ ಆಸ್ಪತ್ರೆಯ ಮೇಲಿನ ದಾಳಿಯು ಅಂತರರಾಷ್ಟ್ರೀಯ ಖಂಡನೆಗೆ ಕಾರಣವಾಗಿದೆ.

ಇಸ್ರೇಲ್ ಆಸ್ಪತ್ರೆ ಮೇಲೆ ಬಾಂಬ್ ಸುರಿಮಳೆ ಸುರಿಸಿದೆ. ಆಸ್ಪತ್ರೆ ಮೇಲೆ ನಡೆದ ಭೀಕರ ದಾಳಿಯಲ್ಲಿ ಪುಟ್ಟ ಮಕ್ಕಳು ಸೇರಿ 500ಕ್ಕೂ ಹೆಚ್ಚು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜೀವ ಉಳಿಸಿಕೊಳ್ಳಲು ಜನ ಪರದಾಟ ನಡೆಸುವಂತಾಗಿದೆ.

Leave a Comment

Your email address will not be published. Required fields are marked *