ಬಿಜೆಪಿ ರಾಜ್ಯಾಧ್ಯಕ್ಷರಾಗಿ ಶೋಭಾ ಕರಂದ್ಲಾಜೆ ಬಹುತೇಕ ಫಿಕ್ಸ್!? ವಿಜಯ ದಶಮಿಯಂದು ಘೋಷಣೆ ಸಾಧ್ಯತೆ

ಸಮಗ್ರ ನ್ಯೂಸ್: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಂಸದೆ ಶೋಭಾ ಕರಂದ್ಲಾಜೆ ನೇಮಕಗೊಳ್ಳುವುದು ಬಹುತೇಕ ಖಚಿತವಾಗಿದೆ. ಈ ಮೂಲಕ ಒಂದು ಕಡೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪಕ್ಷದ ಮೇಲಿನ ಹಿಡಿತ ಉಳಿಸಿಕೊಳ್ಳಲಿದ್ದರೆ, ಮತ್ತೊಂದೆಡೆ ಕರಾವಳಿ ಭಾಗಕ್ಕೆ ರಾಜ್ಯಾಧ್ಯಕ್ಷ ಸ್ಥಾನ ಎರಡನೇ ಬಾರಿ ಒಲಿಯಲಿದೆ.

Ad Widget ... ..

ಅಕ್ಟೋಬರ್ 17ರ ಮಂಗಳವಾರ ರಾತ್ರಿ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ದೂರವಾಣಿ ಕರೆ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಈ ವಿಷಯ ತಿಳಿಸಿದ್ದು, ಶೀಘ್ರದಲ್ಲೇ ಈ ಬಗ್ಗೆ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ.

Ad Widget

ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಘವೇಂದ್ರ ಬೇಡ ಅಂತ ಯಡಿಯೂರಪ್ಪ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಪುನಃ: ಕಸರತ್ತು ನಡೆಸಿದ ಬಿಜೆಪಿ ವರಿಷ್ಠರು ಯಡಿಯೂರಪ್ಪ ಮತ್ತು ಅವರ ವಿರೋಧಿ ಬಣಕ್ಕೆ ಒಮ್ಮತದ ಅಭ್ಯರ್ಥಿಯ ಬಗ್ಗೆ ಚರ್ಚೆ ನಡೆಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಳಿ ಬಂದ ಒಮ್ಮತದ ಅಭ್ಯರ್ಥಿ ಶೋಭಾ ಕರಂದ್ಲಾಜೆ ಆಯ್ಕೆಯಾಗಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಯಡಿಯೂರಪ್ಪ ಅವರೊಂದಿಗೆ ಮಂಗಳವಾರ ಮಾತನಾಡಿದ ಕೇಂದ್ರ ಸಚಿವ ಅಮಿತ್ ಶಾ, ಮಾತುಕತೆಯ ಸಂದರ್ಭದಲ್ಲಿ ಶೋಭಾ ಕರಂದ್ಲಾಜೆ ಓಕೆನಾ? ಅಂತ ಪ್ರಶ್ನಿಸಿದ್ದಾರೆ. ಮುಂದಿನ ಸೋಮವಾರ ಇಲ್ಲವೇ ಮಂಗಳವಾರ(ಅ.24)ವೇಳೆಗೆ ಶೋಭಾ ಕರಂದ್ಲಾಜೆ ಹೆಸರು ಅಧಿಕೃತವಾಗಿ ಘೋಷಣೆಯಾಗುವ ಸಾಧ್ಯತೆ ಇದೆ.

Leave a Comment

Your email address will not be published. Required fields are marked *