Ad Widget .

ಆಯುಧಪೂಜೆ ದಿನ ವಿಧಾನಸೌಧ, ವಿಕಾಸ ಸೌಧದಲ್ಲಿ ಅರಶಿನ ಕುಂಕುಮ ಬಳಸುವಂತಿಲ್ಲ – ಸಿಎಂ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರವು ಆಯುಧ ಪೂಜೆಗೆ ವಿಧಾನಸೌಧ ಹಾಗೂ ವಿಕಾಸಸೌಧಗಳಲ್ಲಿ ಅರಿಶಿನ ಕುಂಕುಮ ಸೇರಿ ರಾಸಾಯನಿಕ ವಸ್ತುಗಳನ್ನು ಬಳಸದಂತೆ ಆದೇಶ ಹೊರಡಿಸಿರುವ ಕುರಿತಂತೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

Ad Widget . Ad Widget .

ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಅರಿಶಿನ-ಕುಂಕುಮ ಸೇರಿದಂತೆ ಯಾವುದೇ ರಾಸಾಯನಿಕಯುಕ್ತ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್‌ಗಳಲ್ಲಿ ಬಳಸಬಾರದು ಎಂದು ಹೊರಡಿಸಿರುವ ಆದೇಶ ಇದು ಹೊಸತೇನಲ್ಲ. ಇವುಗಳು ಪಾರಂಪರಿಕ ಕಟ್ಟಡಗಳಾಗಿರುವುದರಿಂದ ರಾಸಾಯನಿಕಯುಕ್ತ ಬಣ್ಣಗಳು ನೆಲಹಾಸಿನ ಮೇಲೆ ಬಿದ್ದು, ಅವುಗಳ ಕಲೆ ಶಾಶ್ವತವಾಗಿ ಅಥವಾ ಬಹುಕಾಲ ಉಳಿಯುವುದರಿಂದ ಇದರಿಂದಾಗುವ ಹಾನಿ ತಪ್ಪಿಸಲು ಹಿಂದಿನ ಸರ್ಕಾರಗಳು ಪಾಲಿಸಿಕೊಂಡು ಬಂದಿದ್ದ ಸಂಪ್ರದಾಯವನ್ನೇ ನಾವು ಪಾಲಿಸಿದ್ದೇವೆ ಎಂದು ಹೇಳಿದ್ದಾರೆ.

Ad Widget . Ad Widget .

ಈ ಬಗ್ಗೆ ಸರ್ಕಾರದ ವಿರುದ್ಧ ನಡೆಸಲಾಗುತ್ತಿರುವ ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ಮನವಿ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Leave a Comment

Your email address will not be published. Required fields are marked *