Ad Widget .

ಕಾಂಗ್ರೆಸ್ ಮುಖಂಡನ ಮನೆ ಮೇಲೆ ಇಡಿ ದಾಳಿ

ಮಾಜಿ ಸಚಿವ ವೈಜಿನಾಥ್ ಪಾಟೀಲ್ ಅವರ ತಮ್ಮ ಕಾಂಗ್ರೆಸ್ ಮುಖಂಡ ಬಾಬುರಾವ್ ಪಾಟೀಲ್
ಅವರ ಮನೆ ಮೇಲೆ ಗುರುವಾರ ಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ.

Ad Widget . Ad Widget .

ಇಡಿ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದು, ತೆಲಂಗಾಣ ನೋಂದಣಿ ಸಂಖ್ಯೆ ಇನೋವಾ ಕಾರ್ ನಲ್ಲಿ ಆಗಮಿಸಿದ ಅಧಿಕಾರಿಗಳು ಕೇಂದ್ರ ಮೀಸಲು ಪಡೆಯೊಂದಿಗೆ ಪರಿಶೀಲನೆ ನಡೆಸಿದ್ದಾರೆ.

Ad Widget . Ad Widget .

ಚಿಂಚೋಳಿ ತಾಲೂಕಿನ ಪ್ರಭಾವಿ ಕಾಂಗ್ರೆಸ್ ಮುಖಂಡರಾಗಿರುವ ಬಾಬುರಾವ್ ಪಾಟೀಲ್, ಈ ಹಿಂದೆ ಬಿಜೆಪಿ ಪಕ್ಷದಲ್ಲಿದ್ದು, 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಇದೀಗ ಅವರ ಮನೆಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿರುವುದು ಹಲವು ರಾಜಕೀಯ ಚರ್ಚೆಗಳಿಗೆ ಎಡೆ ಮಾಡಿಕೊಡುತ್ತಿದೆ.

Leave a Comment

Your email address will not be published. Required fields are marked *