ಸಮಗ್ರ ಉದ್ಯೋಗ: Dakshina Kannada Zilla Panchayat ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 17 Library Supervisor ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್ 6, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ವಿದ್ಯಾರ್ಹತೆ:
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಲೈಬ್ರರಿ ಸೈನ್ಸ್ನಲ್ಲಿ ಸರ್ಟಿಫಿಕೇಶನ್ ಕೋರ್ಸ್ ಪೂರ್ಣಗೊಳಿಸಿರಬೇಕು.
ವಯೋಮಿತಿ:
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನವೆಂಬರ್ 6, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
PWD ಅಭ್ಯರ್ಥಿಗಳು: ರೂ.100/-
SC/ST/ಪ್ರವರ್ಗ-I/ಮಾಜಿ ಸೈನಿಕ ಅಭ್ಯರ್ಥಿಗಳು: ರೂ.200/-
ಪ್ರವರ್ಗ-2ಎ/2ಬಿ/3ಎ ಮತ್ತು 3ಬಿ ಅಭ್ಯರ್ಥಿಗಳು: ರೂ.300/-
ಸಾಮಾನ್ಯ ಅಭ್ಯರ್ಥಿಗಳು: ರೂ.500/-
ಪಾವತಿ ವಿಧಾನ: ಆನ್ಲೈನ್
ವೇತನ:
ಮಾಸಿಕ ₹ 15,196
ಉದ್ಯೋಗದ ಸ್ಥಳ:
ದಕ್ಷಿಣ ಕನ್ನಡ
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16/10/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ನವೆಂಬರ್ 6, 2023
ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.