Ad Widget .

ನವರಾತ್ರಿ ನವದುರ್ಗೆ| ದುರ್ಗಾಷ್ಟಮಿ ದಿನ ಮಹಾಗೌರಿ ಪೂಜೆ ಹೇಗೆ?| ಆರಾಧನೆ, ಮಹತ್ವದ ಬಗ್ಗೆ ತಿಳಿಯೋಣ…

ಸಮಗ್ರ ವಿಶೇಷ: ನವರಾತ್ರಿ 8ನೇ ದಿನವೇ ದುರ್ಗಾಷ್ಟಮಿ. ಈ ದಿನದಂದು, ದುರ್ಗಾ ದೇವಿಯ 8ನೇ ರೂಪವಾದ ಮಹಾಗೌರಿ ರೂಪವನ್ನು ಪೂಜಿಸಲಾಗುತ್ತದೆ. ಶಾರದೀಯ ನವರಾತ್ರಿ 2023 ರ 8ನೇ ದಿನವು ಅಕ್ಟೋಬರ್‌ 22 ರಂದು ಭಾನುವಾರ ಬಂದಿದೆ. ಈ ದಿನ ಮಹಾಗೌರಿಯ ಆರಾಧನೆಯನ್ನು ಮಾಡಲಾಗುತ್ತದೆ. ಈ ದಿನ ಕನ್ಯಾ ಪೂಜೆಯನ್ನು ಸಹ ನಡೆಸಲಾಗುತ್ತದೆ.

Ad Widget . Ad Widget .

ಪಾರ್ವತಿ ದೇವಿಯು ಮನುಷ್ಯರ ಅವತಾರ ಎತ್ತಿ ಭೂಮಿಯಲ್ಲಿ ಜನಿಸಿದಳು. ಶಿವನ್ನು ಪಡೆಯುವುದು ಆ ಜನ್ಮದಲ್ಲಿ ಅವಳ ಗುರಿಯಾಗಿರುತ್ತದೆ. ನಾರದ ಮಹರ್ಷಿಗಳ ಸಲಹೆಯ ಮೇರೆಗೆ ಸುದೀರ್ಘ ತಪಸ್ಸಿಗೆ ಕುಳಿತ ಆಕೆಯು ಅನ್ನಾಹಾರ, ನೀರು ತ್ಯಜಿಸಿದಳು. ಸುದೀರ್ಘ ಕಾಲ ಆಕೆ ತಪಸ್ಸಿಗೆ ಕುಳಿತ ಕಾರಣ ಆಕೆಯ ಮೈಗೆ ಧೂಳು ಮತ್ತಿಕೊಂಡಿತು. ಬಳ್ಳಿಗಳು ಬೆಳೆದವು. ಸೂರ್ಯನ ವಿಪರೀತ ಶಾಖದಿಂದ ಆಕೆಯ ದೇಹವು ಬೆಂದುಹೋದಂತಾಯಿತು. ಆದರೂ ಆಕೆ ಸಾವಿರ ವರ್ಷಗಳ ಕಾಲ ಶಿವನಿಗಾಗಿ ಕಾದು ಕುಳಿತಳು.

Ad Widget . Ad Widget .

ಪಾರ್ವತಿಯ ಭಕ್ತಿಗೆ ಮೆಚ್ಚಿ ಪ್ರತ್ಯಕ್ಷನಾದ ಶಿವನು, ಆಕೆಯ ಸ್ಥಿತಿ ಕಂಡು ಗಂಗೆಯ ಪವಿತ್ರ ಜಲವನ್ನು ಆಕೆಯ ಮೇಲೆ ಪ್ರೋಕ್ಷಣೆ ಮಾಡಿದಾಗ ಆಕೆಯ ಮುಖ ಮೊದಲಿಗಿಂತ ತೇಜಸ್ವಿಯಾಯಿತು. ಸ್ಪಟಿಕದ ಕಲ್ಲಿನಂತೆ ಹೊಳೆಯುತ್ತಿದ್ದ ಆಕೆಯ ಮುಖವು ಚಂದ್ರನ ಶಾಂತತೆಯನ್ನು ಹೊಂದಿತು. ಆಕೆಯು ಮಹಾಗೌರಿಯಾಗಿ ಹೊಸ ಜನ್ಮ ಎತ್ತಿದಳು. ಶಿವನು ಆಕೆಯ ಭಕ್ತಿಗೆ ಮೆಚ್ಚಿ ಆಕೆಯನ್ನು ವರಿಸಿದ.

ಮಹಾಗೌರಿ ಪೂಜೆಯ ರೀತಿ
ತಾಯಿ ಗೌರಿಯನ್ನು ಪೂಜಿಸಲು ರಾತ್ರಿ ಅರಳಿದ ಮಲ್ಲಿಗೆಯನ್ನು ಬಳಸಲಾಗುತ್ತದೆ. ತಾಯಿಯನ್ನು ಶುದ್ಧ ಮನಸ್ಸು, ಭಕ್ತಿಯಿಂದ ಪೂಜಿಸಿ. ಗಣಪತಿ ಪ್ರಾರ್ಥನೆ ಮೂಲಕ ಪೂಜೆಯನ್ನು ಶುರು ಮಾಡಿ. ತಾಯಿ ಗೌರಿಗೆ ಷೋಡಶೋಪಚಾರ ಮಾಡಿ. ಆರತಿಯೊಂದಿಗೆ ಪೂಜೆ ಮುಗಿಸಿ.

ಮಹಾ ಗೌರಿ ಸ್ತುತಿ:
ಯಾ ದೇವಿ ಸರ್ವಭೂತೇಶು ಮಾ ಮಹಾಗೌರಿ ರೂಪೇಣ ಸಂಸ್ಥಿತಾ ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ

Leave a Comment

Your email address will not be published. Required fields are marked *