Ad Widget .

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಶಾರದಾ ಪೂಜೆ, ಆಯುಧ ಪೂಜೆ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯದಲ್ಲಿ ಕಾಲೇಜಿನ ವಿದ್ಯಾರ್ಥಿ ಪರಿಷತ್ತಿನ ವತಿಯಿಂದ ಅ. 21ರಂದು ಶಾರದಾ ಪೂಜೆ ಹಾಗೂ ಆಯುಧ ಪೂಜೆ ಕಾರ್ಯಕ್ರಮ ನಡೆಯಿತು.

Ad Widget . Ad Widget .

ಬೆಳಿಗ್ಗೆ 10 ಗಂಟೆಯಿಂದ 12ರ ವರೆಗೆ ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಪ್ರತಿ ವಿದ್ಯಾರ್ಥಿಗಳಿಂದ ತರಲ್ಪಟ್ಟ ಪುಸ್ತಕಗಳಿಗೆ ಪೂಜೆಯನ್ನು ನೆರವೇರಿಸಲಾಯಿತು. ನಂತರ ಕಾಲೇಜಿನ ಗ್ರಂಥಾಲಯ, ಪ್ರಯೋಗಾಲಯ ಹಾಗೂ ಜಿಮ್ ಗಳಿಗೆ ಪೂಜೆ ಮಾಡಲಾಯಿತು. ಕಾಲೇಜಿನ ಆಯುಧಗಳಿಗೆ ಪೂಜೆಯನ್ನು ಪೂರ್ಣಗೊಳಿಸಿ, ವಿದ್ಯಾರ್ಥಿಗಳ ಹಾಗೂ ಉಪನ್ಯಾಸಕರ ವಾಹನಗಳಿಗೆ ಪೂಜೆ ಮಾಡಿ, ಎಲ್ಲರಿಗೂ ಪ್ರಸಾದವನ್ನು ವಿತರಿಸಲಾಯಿತು.

Ad Widget . Ad Widget .

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು ಮತ್ತು ಬೋಧಕ, ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *