Ad Widget .

ಕೊಟ್ಟಿಗೆಹಾರ: ಹುಲಿ ಉಗುರು ವಶ| ಇಬ್ಬರ ಬಂಧನ

ಸಮಗ್ರ ನ್ಯೂಸ್:ಮೂಡಿಗೆರೆ ವಲಯ ಅರಣ್ಯ ವ್ಯಾಪ್ತಿಯ ಭಾರತಿ ಬೈಲ್ ಸಮೀಪದ ಕುಂದ್ರ ಎಂಬಲ್ಲಿ ಹುಲಿ ಉಗುರು ಪತ್ತೆಯಾಗಿರುವ ಖಚಿತ ಮಾಹಿತಿ ಮೇರೆಗೆ ಇಬ್ಬರು ಆರೋಪಿಗಳನ್ನು ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ.

Ad Widget . Ad Widget .

ಭಾರತಿ ಬೈಲ್ ಸಮೀಪದ ಕುಂಡ್ರಾದ ಆರೋಪಿ ಸತೀಶ್ ಬಳಿ ಬೆಳ್ಳಿ ಸರದಲ್ಲಿ ಹುಲಿ ಉಗುರು ಪತ್ತೆಯಾಗಿದೆ. ಮತ್ತೋರ್ವ ಆರೋಪಿ ಹುಲ್ಲೇಮನೆ ಕುಂದೂರಿನ ಕೆ.ಎಸ್.ರಂಜಿತ್ ಅವರನ್ನು ಕೂಡ ಬಂಧಿಸಲಾಗಿದೆ. ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

Ad Widget . Ad Widget .

ಚಿಕ್ಕಮಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್ ಬಾಬು ಹಾಗೂ ಮೂಡಿಗೆರೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಡಿ.ರಘು ಅವರ ನಿರ್ದೇಶನದ ಮೇರೆಗೆ ಈ ಕಾರ್ಯಾಚರಣೆಯಲ್ಲಿ ಮೂಡಿಗೆರೆ ವಲಯ ಅರಣ್ಯ ಅಧಿಕಾರಿಗಳಾದ ಚರಣ್ ಕುಮಾರ್, ಆಲ್ದೂರು ವಲಯ ಅರಣ್ಯ ಅಧಿಕಾರಿ ಹರೀಶ್, ಮೂಡಿಗೆರೆ ಉಪ ವಲಯ ಅರಣ್ಯ ಅಧಿಕಾರಿಗಳಾದ ಶಿವಕುಮಾರ್, ಆರ್.ಹರೀಶ್, ಚೇತನ್ ಕುಮಾರ್, ಸುಮಂತ್ ಭಾಗವಹಿಸಿದ್ದರು.

Leave a Comment

Your email address will not be published. Required fields are marked *