ಸುಬ್ರಹ್ಮಣ್ಯ: ಕೆಎಸ್ಎಸ್ ಕಾಲೇಜಿನ ಮೆಮೊರಂಡಮ್ ಆಫ್ ಅಂಡರ್ಸ್ಟ್ಯಾಂಡಿಂಗ್ ದಾಖಲೆ ಹಸ್ತಾಂತರ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ, ಸುಬ್ರಹ್ಮಣ್ಯ ವಾಣಿಜ್ಯ ಹಾಗೂ ಉದ್ಯಮಾಡಳಿತ ವಿಭಾಗ ಮತ್ತು ಶ್ರೀ ರಾಮ ಪ್ರಥಮ ದರ್ಜೆ ಮಹಾವಿದ್ಯಾಲಯ, ಕಲ್ಲಡ್ಕದ ವಾಣಿಜ್ಯಶಾಸ್ತ್ರ ವಿಭಾಗದೊಂದಿಗೆ “ಮೆಮೊರಂಡಮ್ ಆಫ್ ಅಂಡರ್ಸ್ಟ್ಯಾಂಡಿಂಗ್”ಗೆ ದಾಖಲೆಯನ್ನು ಹಸ್ತಾಂತರಿಸುವ ಮೂಲಕ ಚಾಲನೆ ನೀಡಲಾಯಿತು.

Ad Widget ... ..

ಈ ಸಂದರ್ಭದಲ್ಲಿ ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರ್ಕಟ್ಟೆ ಶುಭ ಹಾರೈಸಿದರು. ಕೆಎಸ್ಎಸ್ ಮಹಾವಿದ್ಯಾಲಯದ ವಾಣಿಜ್ಯಶಾಸ್ತ್ರ ಉಪನ್ಯಾಸಕ ಶಿವಪ್ರಸಾದ್ ಎಸ್. ಎಮ್ಓಯು ಇದರ ಮಾಹಿತಿ ನೀಡಿದರು.

Ad Widget

ಎಮ್ಓಯು ಕಾರ್ಯಕ್ರಮದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ ಸುಬ್ರಹ್ಮಣ್ಯದ ವಾಣಿಜ್ಯ ಹಾಗೂ ಉದ್ಯಮಾಡಳಿತ ವಿಭಾಗದ ಎಂಟು ವಿದ್ಯಾರ್ಥಿಗಳು ಸ್ಟೂಡೆಂಟ್ ಎಕ್ಸ್ಚೇಂಜ್ ಪ್ರೋಗ್ರಾಮ್ ನಡೆಸಿ ಕೊಟ್ಟರು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ವಾಣಿಜ್ಯಶಾಸ್ತ್ರ ಉಪನ್ಯಾಸಕ ಹರ್ಷಿತ್ ಮತ್ತು ದೀಕ್ಷಿತಾ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *