ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಆಳದ ಪ್ರಪಾತಕ್ಕೆ ಕಾರು ಬಿದ್ದು, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಬಾಳೂರು ಠಾಣಾ ವ್ಯಾಪ್ತಿಯ ಅಬ್ರುಕೊಡುಗೆ ಬಳಿ ನಡೆದಿದೆ.
ಅಪಘಾತದಲ್ಲಿ ಮಾರುತಿ 800 ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ರಂಜನ್ (38) ಮೃತಪಟ್ಟಿದ್ದಾರೆ. ಜನ್ನಾಪುರದಿಂದ ಕಳಸ ಕಡೆಗೆ ಹೋಗುವಾಗ ಅವಘಡ ಸಂಭವಿಸಿದೆ. ತಡೆಗೋಡೆ ಇಲ್ಲದೆ ಇರುವುದರಿಂದ ಏಕಾಏಕಿ ಪ್ರಪಾತಕ್ಕೆ ಉರುಳಿ ಬಿದ್ದಿದೆ.

ತಿರುವಿನಲ್ಲಿ ತಡೆಗೋಡೆ ನಿರ್ಮಿಸಲು ಹಲವು ಬಾರಿ ಮನವಿ ಮಾಡಲಾದರು ಯಾವುದೇ ಸ್ಪಂದನೆ ದೊರಕಿಲ್ಲ. ಈ ಸಾವಿಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಬಾಳೂರು ಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ.