ಬೆಳ್ಳಂಬೆಳಗ್ಗೆ ಭೀಕರ ಅಪಘಾತ| ಟಾಟಾ ಸುಮೋ ಡಿಕ್ಕಿ ಹೊಡೆದು 12 ಮಂದಿ ಸಾವು

ಸಮಗ್ರ ನ್ಯೂಸ್: ನಿಂತಿದ್ದ ಸಿಮೆಂಟ್ ಲಾರಿಗೆ ಟಾಟಾ ಸುಮೋ ಡಿಕ್ಕಿ ಹೊಡೆದು ಸ್ಥಳದಲ್ಲೇ 12 ಮಂದಿ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಸಮೀಪದಲ್ಲಿ ನಡೆದಿದೆ.

Ad Widget ... ..

ಬೆಂಗಳೂರು -ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ದಟ್ಟ ಮಂಜು ಕವಿದಿದ್ದರಿಂದ ಈ ಘಟನೆ ನಡೆದಿದೆ ಅಂತ ಸ್ಥಳೀಯರು ಮಾಧ್ಯಮಗಳಿಗೆ ತಿಳಿಸಿದ್ದು, ರಸ್ತೆಯ ಅವ್ಯವಸ್ಥೆ ಬಗ್ಗೆ ಕಿಡಿಕಾರಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Ad Widget

ಆಂಧ್ರದ ಗೋರಂಟ್ಲು ಮೂಲದವರು ಬೆಂಗಳೂರಿನ ಹೊಂಗಸಂದ್ರದಲ್ಲಿ ವಾಸವಿದ್ದರು, ದಸರಾ ಹಬ್ಬಕ್ಕೆ ಗೋರಂಟ್ಲಿಗೆ ತೆರಳಿ ಮತ್ತೆ ಬೆಂಗಳೂರಿಗೆ ವಾಪಾಸಾಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮೃತರನ್ನು ಅರುಣ್, ನವೀನ್ ಕುಮಾರ್, ನಂಜುಂಡಪ್ಪ, ಪದ್ಮಾವತಿ ಹಾಗೂ ರುತ್ವಿಕ್ ಕುಮಾರ್ ಎಂದು ಗುರುತಿಸಲಾಗಿದೆ,

Leave a Comment

Your email address will not be published. Required fields are marked *