Ad Widget .

ಅಂತರ್ರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಆತ್ಮಹತ್ಯೆ ಶರಣು

ಸಮಗ್ರ ನ್ಯೂಸ್: ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರು ಗ್ರಾಮಾಂತರದ ನೆಲಮಂಗಲದ ಅರಿಶಿನಕುಂಟೆಯಲ್ಲಿ ವರದಿಯಾಗಿದೆ.

Ad Widget . Ad Widget .

ಮೃತರನ್ನು ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಧನಲಕ್ಷ್ಮೀ (25) ಎಂದು ಗುರುತಿಸಲಾಗಿದೆ. ಸ್ನೇಹಿತರೊಂದಿಗೆ ಮೈಸೂರು ದಸರಾ ನೋಡಿಕೊಂಡು ಬಂದಿದ್ದ ಧನಲಕ್ಷ್ಮೀ, ತಂದೆ ಹಾಗೂ ತಮ್ಮ ಮನೆಯಲ್ಲಿರುವಾಗಲೇ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Ad Widget . Ad Widget .

ಅಂತಾರಾಷ್ಟ್ರೀಯ ಮಟ್ಟದಲ್ಲಿ 3 ಬಾರಿ ಕಬ್ಬಡಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಧನಲಕ್ಷ್ಮೀ, ಕಾಡುಗೋಡಿ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಈ ಬಗ್ಗೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾವುದೋ ವಿಚಾರಕ್ಕೆ ಮನನೊಂದು ತನ್ನಷ್ಟಕ್ಕೆ ತಾನೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತ ಯುವತಿಯ ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Leave a Comment

Your email address will not be published. Required fields are marked *