Ad Widget .

ಪದವೀಧರ ಶಿಕ್ಷಕರ ನೇಮಕಾತಿ ಇಂದಿನಿಂಲೇ ಆರಂಭ! 13,500 ದೈಹಿಕ ಶಿಕ್ಷಕರ ನೇಮಕಾತಿಯು ಇದೆ

ಹೈಕೋರ್ಟ್ ಆದೇಶದಂತೆ ರಾಜ್ಯದ ಸರ್ಕಾರಿ ಶಾಲೆಗಳ 6 ರಿಂದ 8 ನೇ ತರಗತಿವರೆಗಿನ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಪುನಾರಂಭಿಸಿದೆ. ಕಳೆದ ಮಾರ್ಚ್‌ನ ಪ್ರಕಟಿಸಿದ್ದ 1:1 ಅನುಪಾತದ ಮುಖ್ಯ ಆಯ್ಕೆ ಪಟ್ಟಿಯಲ್ಲಿ ಕೌನ್ಸೆಲಿಂಗ್ ಗೆ ಅರ್ಹರಾಗಿರುವ ಅಭ್ಯರ್ಥಿಗಳ ಪಟ್ಟಿಯನ್ನು ಗುರುವಾರ (ಅ‌.19) ಪ್ರಕಟಿಸುವುದಾಗಿ ತಿಳಿಸಿದೆ.

Ad Widget . Ad Widget .

ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ 371 ಜೆಗೆ ಸಂಬಂಧಿಸಿದ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳು ಮತ್ತು ಬಿಬಿಎಂಪಿ ವ್ಯಾಪ್ತಿಯ ಶೇ.8 ರಷ್ಟು ಹುದ್ದೆಗಳಿಗೆ ಸಂಬಂಧಿಸಿದ ಬೆಂಗಳೂರು ದಕ್ಷಿಣ ಮತ್ತು ಉತ್ತರ ಜಿಲ್ಲೆಗಳ ಪ್ರಕರಣಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಿಗೆ ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮುಂದುವರೆಸಲಾಗುವುದು ಎಂದು ಇಲಾಖೆ ತಿಳಿಸಿದೆ.

Ad Widget . Ad Widget .

ಈ ಪ್ರಕ್ರಿಯೆ ಪೂರ್ಣಗೊಂಡರೆ 15 ಸಾವಿರ ಶಿಕ್ಷಕ ಹುದ್ದೆಗೆ ಸರ್ಕಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆಯಾಗಿರುವ 13,500 ಕ್ಕೂ ಹೆಚ್ಚು ಶಿಕ್ಷಕರು ಈ ಶೈಕ್ಷಣಿಕ ಸಾಲಿನಲ್ಲೇ ಶಾಲೆಗಳಲ್ಲಿ ಬೋಧನಾ ಕಾರ್ಯಕ್ಕೆ ನಿಯೋಜನೆಗೊಳ್ಳಲಿದ್ದಾರೆ.

ಈಗಾಗಲೇ ಕೆಲವು ಕಡೆಗಳಲ್ಲಿ ಎನ್.ಇ.ಪಿ. ಅಡಿ ಮಕ್ಕಳು ಶಿಕ್ಷಣ ಮುಂದುವರಿಸುತ್ತಿದ್ದಾರೆ. ಅವರ ಶಿಕ್ಷಣಕ್ಕೆ ತೊಂದರೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಈಗಾಗಲೇ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ನ್ಯಾಯಾಲಯದಲ್ಲಿ ಈ ಸಂಬಂಧ ವಾದ ಮಂಡಿಸಲು ರಾಜ್ಯ ಸರ್ಕಾರ ಅಗತ್ಯ ಸಿದ್ಧತೆ ಮಾಡಿಕೊಂಡಿದೆ.

ಗ್ರಾಮೀಣ ಜನರು ವಾಸಿಸುವ ನೆಲದ ಹಕ್ಕು ಅವರಿಗೆ ಕೊಡಲು 94 ಸಿಸಿಯಡಿ ಹಕ್ಕುಪತ್ರ ವಿತರಿಸಲಾಗುತ್ತಿದೆ. ಕಂದಾಯ ಭೂಮಿ ಯಾವುದು, ಅರಣ್ಯಭೂಮಿ ಯಾವುದು ಎನ್ನುವ ಕುರಿತು ಸರ್ವೆ ನಡೆಸಲು ಸಹ ಸಂಬಂಧಪಟ್ಟ ಸಚಿವರ ಜೊತೆ ಚರ್ಚೆ ನಡೆಸಲಾಗಿದೆ ಎಂದು ಹೇಳಿದ್ದರು.

Leave a Comment

Your email address will not be published. Required fields are marked *