ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ|ಸುಳಿವು ನೀಡಿದವರಿಗೆ ಎರಡು ಲಕ್ಷ ರೂಪಾಯಿ ಘೋಷಣೆ

ಸಮಗ್ರ ನ್ಯೂಸ್: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಸುಳಿವು ನೀಡಿದವರಿಗೆ ಎರಡು ಲಕ್ಷ ರೂಪಾಯಿ ಘೋಷಣೆ ಮಾಡಿ ಬೆಂಗಳೂರು ಎನ್.ಐ.ಎ ಅಧಿಕಾರಿಯಳು ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ.

Ad Widget ... ..

೨೦೨೨ ಜುಲೈ ೨೬ರಂದು ಹತ್ಯೆಯಾದ ಬೆಳ್ಳಾರೆಯ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ನಂಬರ್ ೨೩ ಆಗಿರುವ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಕೆಗುಡ್ಡೆ ನಿವಾಸಿ ನೌಷದ್ (೩೨) ಎಂಬಾತ ಕೊಲೆ ಮಾಡಿದ ಆರೋಪಿಗಳು ಪರಾರಿಯಾಗಲು ಸಹಕರಿಸಿದ ಹಿನ್ನೆಲೆಯಲ್ಲಿ ಎನ್.ಐ.ಎ ಅಧಿಕಾರಿಗಳು ಈ ಮೊದಲೇ ಪಡಂಗಡಿಯಲ್ಲಿರುವ ಮನೆಗೆ ದಾಳಿ ಮಾಡಿದ್ದರು. ಈ ವೇಳೆ ನೌಷದ್ ಪ್ರಕರಣ ನಡೆದ ಬಳಿಕ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಎನ್.ಐ.ಎ ಅಧಿಕಾರಿಗಳು ನೌಷಾದ್ ಬಗ್ಗೆ ನೋಟಿಸ್ ನೀಡಿ ಹೋಗಿದ್ದರು. ಆರೋಪಿ ಸೋಮವಾರಪೇಟೆಯ ಕಲಕಂದೂರು ಅಬ್ದುಲ್ ರಹಿಮಾನ್, ಸೋಮವಾರಪೇಟೆಯ ಅಬ್ದುಲ್ ನಾಸಿರ್‌ಗೆ ಇದೀಗ ಬೆಂಗಳೂರು ಎನ್.ಐ.ಎ ಅಧಿಕಾರಿಗಳು ಸುಳಿವು ನೀಡಿದವರಿಗೆ ಎನ್.ಐ.ಎ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಲ್ಲಿ ಮಾಹಿತಿ ಗೌಪ್ಯವಾಗಿಟ್ಟು ಆ ವ್ಯಕ್ತಿಗೆ ಎರಡು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಣೆ ಮಾಡಿರುವುದಾಗಿ ಎನ್.ಐ.ಎ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

Ad Widget

Leave a Comment

Your email address will not be published. Required fields are marked *