Ad Widget .

ದಂಡ ಸಂಹಿತೆ ಬದಲಾವಣೆ/ ಶೀಘ್ರವೇ ಸಂಸತ್ತಿನಲ್ಲಿ ಅಂಗೀಕಾರ

ಸಮಗ್ರ ನ್ಯೂಸ್: ಭಾರತೀಯ ದಂಡ ಸಂಹಿತೆ, ಅಪರಾಧ ಪ್ರಕ್ರಿಯಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಕಾಯ್ದೆಗಳಿಗೆ ಬದಲಾಗಿ ಭಾರತೀಯ ನ್ಯಾಯ ಸಂಹಿತೆ ಮಸೂದೆ -2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮಸೂದೆ – 2023 ಮತ್ತು ಭಾರತೀಯ ಸಾಕ್ಷ್ಯ ಮಸೂದೆ-2023 ಗಳಿಗೆ ಲೋಕಸಭೆಯಲ್ಲಿ ಮಂಡಿಸಲಾಗಿದ್ದು, ಶೀಘ್ರದಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿದ್ದಾರೆ.

Ad Widget . Ad Widget .

ಬ್ರಿಟಿಷರ ಕಾಲದಲ್ಲಿ ಜಾರಿಗೆ ತಂದಿದ್ದ ಕಾನೂನು ವ್ಯವಸ್ಥೆಯನ್ನು ಭಾರತ ತ್ಯಜಿಸುತ್ತಿದೆ. ಹೊಸ ಮಸೂದೆಗಳು ಜನರ ಹಕ್ಕುಗಳನ್ನು ರಕ್ಷಿಸುವ ಗುರಿ ಹೊಂದಿದೆ ನೂತನ ಮಸೂದೆಗಳನ್ನು ಗೃಹ ವ್ಯವಹಾರಗಳ ಸಂಸದೀಯ ಸಮಿತಿ ಪರಿಶೀಲಿಸುತ್ತಿದೆ. ಶೀಘ್ರವೇ ಸಂಸತ್ತಿನಲ್ಲಿ ಅಂಗೀಕಾರ ಮಾಡಲಾಗುವುದು ಎಂದು ಅಮಿತ್ ಷಾ ಹೇಳಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *