Ad Widget .

ಆಂದ್ರಪ್ರದೇಶದಲ್ಲಿ ಹಳಿ ತಪ್ಪಿದ ಪ್ಯಾಸೆಂಜರ್ ರೈಲು| ಮೂವರು ಸಾವು, ಹಲವರಿಗೆ ಗಾಯ| ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ

ಸಮಗ್ರ ನ್ಯೂಸ್: ಆಂಧ್ರಪ್ರದೇಶದ ವಿಶಾಖಪಟ್ಟಣಂನಿಂದ ರಾಯಗಡಕ್ಕೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲು ವಿಜಯನಗರಂ ಜಿಲ್ಲೆಯಲ್ಲಿ ಹಳಿತಪ್ಪಿ ಮತ್ತೊಂದು ರೈಲಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Ad Widget . Ad Widget .

ವಿಜಯನಗರ ಜಿಲ್ಲೆ ಕೊತ್ತವಲಸ ಮಂಡಲಮ್ ಕಂಟಕಾಪಲ್ಲಿ ವಿಶಾಖಪಟ್ಟಣ -ಫಲಾಸ ಪ್ಯಾಸೆಂಜರ್ ರೈಲು ಮತ್ತು ವಿಶಾಖಪಟ್ಟಣ -ರಾಯಗಢ ರೈಲುಗಳ ಮಧ್ಯೆ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಅಪಘಾತದಲ್ಲಿ ಅನೇಕರು ಗಂಭೀರವಾಗಿ ಗಾಯಗೊಂಡಿದ್ದು, ಮೃತರ ಸಂಖ್ಯೆ ಹೆಚ್ಚಾಗುವ ಸಂಭವ ಇದೆ.

Ad Widget . Ad Widget .

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ರೈಲ್ವೆ ಸಿಬ್ಬಂದಿ, ಪೊಲೀಸರು, ಅಗ್ನಿಶಾಮಕದಳ ಸಿಬ್ಬಂದಿ ಸ್ಥಳೀಯರ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

Leave a Comment

Your email address will not be published. Required fields are marked *