Ad Widget .

ಬೆಂಗಳೂರಿನಲ್ಲಿ ಬಿಎಂಟಿಸಿಗೆ ಒಂದೇ ದಿನ ಇಬ್ಬರು ಬಲಿ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಬಿಎಂಟಿಸಿ ಜನರಿಗೆ ಯಮನಂತಾಗಿದೆ. ಈ ಬಿಎಂಟಿಸಿ ಗೆ ಬಲಿಯಾಗುವವರು ಒಬ್ಬರಿಬ್ಬರಲ್ಲ. ಈಗ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಿಎಂಟಿಸಿಗೆ ನಿನ್ನೆ ಬೆಳ್ಳಂಬೆಳಿಗ್ಗೆ ಇಬ್ಬರು ಬಲಿಯಾಗಿದ್ದಾರೆ.

Ad Widget . Ad Widget .

ರಸ್ತೆ ದಾಟುವ ವೇಳೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವೀಣಾ ಬಿಎಂಟಿಸಿ ಬಸ್‌ಗೆ ಬಲಿಯಾದ ಮಹಿಳೆ. ಹುಳಿಮಾವು ಸಂಚಾರಿ ಠಾಣಾ ವ್ಯಾಪ್ತಿಯ ಅರಕೆರೆಯ ಶ್ರೀ ಸಾಯಿ ಗಾರ್ಮೆಂಟ್ಸ್ ಬಳಿ ಘಟನೆ ನಡೆದಿದೆ. ಸ್ಥಳಕ್ಕೆ ಹುಳಿಮಾವು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ad Widget . Ad Widget .

ಇನ್ನು ವಿಜಯನಗರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಮತ್ತೊಬ್ಬ ವ್ಯಕ್ತಿ ಬಿಎಂಟಿಸಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಕುಮಾರ್ (45) ಬಿಎಂಟಿಸಿ ಬಸ್‌ಗೆ ಬಲಿಯಾದ ಬೈಕ್ ಸವಾರ. ಪತ್ನಿಯ ಸೀಮಂತಕ್ಕೆ ಹೂ ತರಲು ಹೋದವರು ಅಪಘಾತಕ್ಕೆ ಬಲಿಯಾಗಿದ್ದಾರೆ. ಗೋವಿಂದರಾಜನಗರ ಬೈಟು ಕಾಫಿ ಮುಂಭಾಗದಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ವಿಜಯನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *