Ad Widget .

ಆಂದ್ರಪ್ರದೇಶ ರೈಲು ದುರಂತ ಪ್ರಕರಣ| ಸಾವಿನ ಸಂಖ್ಯೆ14ಕ್ಕೆ ಏರಿಕೆ

ಸಮಗ್ರ ನ್ಯೂಸ್: ಆಂಧ್ರಪ್ರದೇಶದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚುತ್ತಿದೆ. ಕಾಂತಕಪಲ್ಲಿ ರೈಲ್ವೆ ನಿಲ್ದಾಣದ ಬಳಿ ಎರಡು ರೈಲುಗಳು ಡಿಕ್ಕಿ ಹೊಡೆದಿವೆ. ಘಟನೆಯಲ್ಲಿ 14 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

Ad Widget . Ad Widget .

ವಿಶಾಖಪಟ್ಟಣಂ-ರಾಯಗಡ ಪ್ಯಾಸೆಂಜರ್ ರೈಲು ವಿಜಯನಗರಂ ಜಿಲ್ಲೆಯ ಕೊಥವಲಸ ಮಂಡಲದ ಕಾಂತಕಪಲ್ಲಿ ರೈಲ್ವೆ ನಿಲ್ದಾಣದ ಬಳಿ ಸಿಗ್ನಲ್ ಗಾಗಿ ನಿಂತಿತು. ಅದೇ ಟ್ರ್ಯಾಕ್ನಲ್ಲಿ ಬಂದ ಪಲಾಸಾ ಎಕ್ಸ್ಪ್ರೆಸ್ ವಿಶಾಖಪಟ್ಟಣಂ-ರಾಯಗಡ ಪ್ಯಾಸೆಂಜರ್ ರೈಲಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ವಿಶಾಖಪಟ್ಟಣಂ-ರಾಯಗಡ ಪ್ಯಾಸೆಂಜರ್ ರೈಲಿನ ಮೂರು ಬೋಗಿಗಳು ಹಳಿ ತಪ್ಪಿವೆ.

Ad Widget . Ad Widget .

ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಮಾಹಿತಿ ಪಡೆದ ಪೊಲೀಸರು ಮತ್ತು ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು. ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಯಿತು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

Leave a Comment

Your email address will not be published. Required fields are marked *