Ad Widget .

ಹಿಂಸಾಚಾರಕ್ಕೆ ತಿರುಗಿದ ಮರಾಠ ಮೀಸಲಾತಿ ಹೋರಾಟ/ ಕರ್ಪ್ಯೂ ಜಾರಿ

ಸಮಗ್ರ ನ್ಯೂಸ್: ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಮರಾಠ ಮೀಸಲಾತಿ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು, ಧರಾಶಿವ್ ಮತ್ತು ಬೀಡ್ ಜಿಲ್ಲೆಗಳಲ್ಲಿ ಕರ್ಪ್ಯೂ ವಿಧಿಸಲಾಗಿದೆ. ಮುಂದಿನ ಆದೇಶದವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದ್ದು, ಐದಕ್ಕಿಂತ ಹೆಚ್ಚು ಜನ ಗುಂಪು ಸೇರುವಂತೆ ಇಲ್ಲ ಎಂದು ಸ್ಥಳೀಯ ಆಡಳಿತ ಆದೇಶ ನೀಡಿದೆ. ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗಿದ್ದು, ಅವಶ್ಯಕ ವಸ್ತುಗಳನ್ನು ಹೊರತುಪಡಿಸಿ ಇತರೆ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ.

Ad Widget . Ad Widget .

ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಸತ್ಯಾಗ್ರಹ ಮತ್ತು ಪ್ರತಿಭಟನೆಗಳು ನಡೆಯುತ್ತಿದ್ದು, ಪ್ರತಿಭಟನಾಕಾರರು ಎನ್‍ಸಿಪಿ ಶಾಸಕ ಪ್ರಕಾಶ್ ಸೋಲಂಕಿ ನಿವಾಸ ಮತ್ತು ಮಾಜಲಗಾವ್ ಪುರಸಭೆ ಕಟ್ಟಡದ ಮೇಲೆ ಬೆಂಕಿ ಹಚ್ಚಿ ಧಾಂದಲೆ ನಡೆಸಿದ್ದಾರೆ. ಜೊತೆಗೆ ಕರ್ನಾಟಕಕ್ಕೆ ಸೇರಿದ ಸಾರಿಗೆ ಬಸ್‍ಗೆ ಬೆಂಕಿ ಹಚ್ಚಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *