ಮೂಡಬಿದಿರೆ: ಡಾ. ಮೋಹನ ಆಳ್ವಾರಿಗೆ ಪಿತೃವಿಯೋಗ| ಶತಾಯುಷಿ ಆನಂದ ಆಳ್ವ ದೈವಾಧೀನ

ಸಮಗ್ರ ನ್ಯೂಸ್: ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಧ್ಯಕ್ಷ ಡಾ. ಮೋಹನ್ ಆಳ್ವರ ತಂದೆ ಆನಂದ ಆಳ್ವ ಇಂದು ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.

Ad Widget ... ..

106 ವರ್ಷ ಪ್ರಾಯದ ಆನಂದ ಆಳ್ವ ಇಳಿ ವಯಸ್ಸಿನಲ್ಲೂ ಅತ್ಯಂತ ಕ್ರೀಯಾಶೀಲರಾಗಿ ಗುರುತಿಸಿಕೊಂಡಿದ್ದರು. ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆಯುವ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲೂ ಮುಂಚೂಣಿಯಲ್ಲಿ ಭಾಗವಹಿಸುವ ಕೆಲವೇ ಮಂದಿಗಳಲ್ಲಿ ಆನಂದ ಆಳ್ವರೂ ಒಬ್ಬರಾಗಿದ್ದಾರೆ.

Ad Widget

ಮಕ್ಕಳಾದ ಸೀತಾರಾಮ, ಬಾಲಕೃಷ್ಣ, ಡಾ.ಮೋಹನ್ ಆಳ್ವ, ಮೀನಾಕ್ಷಿ ಸೇರಿದಂತೆ ಅಸಂಖ್ಯಾತ ಬಂಧು-ಮಿತ್ರರನ್ನು ಅಗಲಿರುವ ಆನಂದ ಆಳ್ವ ನಿಧನಕ್ಕೆ ಗಣ್ಯರು ಕಂಬನಿ ಮಿಡಿದ್ದಾರೆ.

ದೇವಸ್ಥಾನಗಳ ಜೀರ್ಣೋದ್ಧಾರ ಸೇರಿದಂತೆ ಹಲವು ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಆನಂದ ಆಳ್ವ ಮೂಡಬಿದಿರೆ ಪರಿಸರದಲ್ಲಿ ಜನಾನುರಾಗಿಯಾಗಿ ಗುರುತಿಸಿಕೊಂಡಿದ್ದರು.

Leave a Comment

Your email address will not be published. Required fields are marked *