ಪುನೀತ್ ಹೃದಯ ಜ್ಯೋತಿ ಯೋಜನೆ/ ರಾಜ್ಯದಲ್ಲಿ ಮುಂದಿನ ತಿಂಗಳು ಜಾರಿಗೆ

ಸಮಗ್ರ ನ್ಯೂಸ್: ಹೃದಯಾಘಾತಕ್ಕೆ ಒಳಗಾದವರಿಗೆ ಸೂಕ್ತ ಕಾಲದಲ್ಲಿ ಚಿಕಿತ್ಸೆ ನೀಡಲು ರಾಜ್ಯದಲ್ಲಿ ಮುಂದಿನ ತಿಂಗಳಿನಿಂದ ಪುನೀತ್ ಹೃದಯ ಜ್ಯೋತಿ ಯೋಜನೆ ಜಾರಿಗೆ ಬರಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Ad Widget ... ..

ವಿಕಾಸಸೌಧದಲ್ಲಿ ಮಾತನಾಡಿದ ಆರೋಗ್ಯ ಸಚಿವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪುನೀತ್ ಹೃದಯ ಜ್ಯೋತಿ ಯೋಜನೆಯನ್ನು ಬಜೆಟ್‍ನಲ್ಲಿ ಘೋಷಣೆ ಮಾಡಿದ್ದು, ಮುಂದಿನ ತಿಂಗಳು ರಾಜ್ಯದಲ್ಲಿ ಜಾರಿಗೆ ತರಲಾಗುತ್ತಿದೆ. ಈ ಯೋಜನೆಯ ಅಡಿಯಲ್ಲಿ ಹೃದಯಾಘಾತ ಆದಾಗ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಮಾಡಿ, ಸಾವಿನ ಪ್ರಮಾಣ ಕಡಿಮೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

Ad Widget

Leave a Comment

Your email address will not be published. Required fields are marked *