October 2023

ಇಸ್ರೇಲ್ ಯುದ್ಧವನ್ನು ಕೊನೆಗೊಳಿಸುತ್ತದೆ/ ಬೆಂಜಮಿನ್ ಎಚ್ಚರಿಕೆಯ ನುಡಿ

ಸಮಗ್ರ ನ್ಯೂಸ್: ಇಸ್ರೇಲ್ ಯುದ್ಧವನ್ನು ಆರಂಭಿಸಿಲ್ಲ. ಆದರೆ ಅದನ್ನು ಕೊನೆಗೊಳಿಸುತ್ತೇವೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಎಚ್ಚರಿಕೆ ನೀಡಿದ್ದಾರೆ ಇಸ್ರೇಲ್ ಯುದ್ಧವನ್ನು ಬಯಸಿರಲಿಲ್ಲ. ಆದರೆ ಅತ್ಯಂತ ಕ್ರೂರವಾಗಿ ಅದನ್ನು ನಮ್ಮ ಮೇಲೆ ಹೇರಲಾಯಿತು. ಈ ಯುದ್ಧದಲ್ಲಿ ಹಮಾಸ್ ದೊಡ್ಡ ಬೆಲೆಯನ್ನೇ ತೆರಬೇಕಾದಿತು. ಅಲ್ಲದೇ ದೀರ್ಘಕಾಲ ಇದರ ಆಘಾತವನ್ನು ನೆನಪನಲ್ಲಿಟ್ಟುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ನಮ್ಮ ಮೇಲೆ ದಾಳಿ ಮಾಡಿ ದೊಡ್ಡ ತಪ್ಪು ಮಾಡಿದೆ ಎಂಬುದು ಹಮಾಸ್ ಗೆ ಅರಿವಾಗಬೇಕಿದೆ. ಮುಂಬರುವ ದಶಕಗಳಲ್ಲಿ ಇಸ್ರೇಲ್‌ನ ಇತರೆ ಶತ್ರುಗಳು ನೆನಪಿನಲ್ಲಿಟ್ಟುಕೊಳ್ಳುವಂತಹ […]

ಇಸ್ರೇಲ್ ಯುದ್ಧವನ್ನು ಕೊನೆಗೊಳಿಸುತ್ತದೆ/ ಬೆಂಜಮಿನ್ ಎಚ್ಚರಿಕೆಯ ನುಡಿ Read More »

ಡೆಂಗ್ಯೂ ಜ್ವರ ಹಿನ್ನಲೆ| ಕ್ರಿಕೆಟರ್ ಶುಭ್​ಮನ್ ಗಿಲ್ ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಡೆಂಗ್ಯೂ ಜ್ವರದಿಂದ ಬಳಲುತ್ತಿರುವ ಟೀಮ್ ಇಂಡಿಯಾ ಸ್ಟಾರ್ ಓಪನರ್ ಶುಭ್​ಮನ್ ಗಿಲ್ ಅವರನ್ನು ಚೆನ್ನೈ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಿಲ್ ಪ್ರಸ್ತುತ ಕಾವೇರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ. ದೆಹಲಿಯಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ಪಂದ್ಯದಿಂದ ಹೊರಗುಳಿಯಲಿರುವ ಗಿಲ್ ಅವರು ಶನಿವಾರ ಅಹಮದಾಬಾದ್‌ನಲ್ಲಿ ನಡೆಯುವ ಹೈ-ವೋಲ್ಟೇಜ್ ಭಾರತ-ಪಾಕಿಸ್ತಾನ ಪಂದ್ಯವನ್ನು ಕೂಡ ಕಳೆದುಕೊಳ್ಳುವ ಸಂಭವವಿದೆ. ಇದು ಟೀಮ್ ಇಂಡಿಯಾಕ್ಕೆ ದೊಡ್ಡ ಹೊಡೆತವಾಗಿದೆ. ಭಾನುವಾರ ಆಸ್ಟ್ರೇಲಿಯಾ ವಿರುದ್ಧದ ಭಾರತದ ಆರಂಭಿಕ ವಿಶ್ವಕಪ್ ಪಂದ್ಯವನ್ನು ಕಳೆದುಕೊಂಡಿದ್ದ ಗಿಲ್ ಅವರ ಪ್ಲೇಟ್‌ಲೆಟ್

ಡೆಂಗ್ಯೂ ಜ್ವರ ಹಿನ್ನಲೆ| ಕ್ರಿಕೆಟರ್ ಶುಭ್​ಮನ್ ಗಿಲ್ ಆಸ್ಪತ್ರೆಗೆ ದಾಖಲು Read More »

ಬೆಳ್ತಂಗಡಿ: ಅರಣ್ಯಾಧಿಕಾರಿಗಳಿಂದ ಮನೆ ತೆರವಿಗೆ ಯತ್ನ| ಶಾಸಕರ ತಂಡದಿಂದ ತೀವ್ರ ತರಾಟೆ

ಸಮಗ್ರ ನ್ಯೂಸ್: ಹಲವಾರು ವರ್ಷಗಳಿಂದ ಅರಣ್ಯ ಭೂಮಿಯಲ್ಲಿ ವಾಸವಿದ್ದ ಕುಟುಂಬವನ್ನು ಒಕ್ಕಲೆಬ್ಬಿಸಲು ಬಂದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು, ಪರಿಷತ್‌ ಸದಸ್ಯರು ಒಟ್ಟಾಗಿ ತರಾಟೆಗೆತ್ತಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕಳಂಜದಲ್ಲಿ ನಡೆದಿದೆ. ಕಳಂಜ ಪ್ರದೇಶದಲ್ಲಿ ಹಲವಾರು ವರ್ಷಗಳಿಂದ ನೆಲೆಸಿರುವ ಧರ್ಮಣ್ಣ ಗೌಡ ಎಂಬವರಿಗೆ ಸೇರಿದ ಮನೆ ತೆರವಿಗೆ ಅಧಿಕಾರಿಗಳು ಸೋಮವಾರ ಬಂದಿದ್ದರು. ಈ ವೇಳೆ ಆಗಮಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಸುಳ್ಯ ಶಾಸಕಿ ಭಾಗೀರಥಿ

ಬೆಳ್ತಂಗಡಿ: ಅರಣ್ಯಾಧಿಕಾರಿಗಳಿಂದ ಮನೆ ತೆರವಿಗೆ ಯತ್ನ| ಶಾಸಕರ ತಂಡದಿಂದ ತೀವ್ರ ತರಾಟೆ Read More »

ಪುತ್ತೂರು: ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುರಿಯ ಪಡ್ಡು ಬಳಿ ಅ. 10ರಂದು ನಡೆದಿದೆ. ಮೃತರನ್ನು ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್(17) ಎಂದು ಗುರುತಿಸಲಾಗಿದೆ. ವೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಪುತ್ತೂರು: ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ Read More »

ಪ್ರೊ ಕಬಡ್ಡಿ ಲೀಗ್; ದುಬಾರಿ‌‌ ಮೊತ್ತಕ್ಕೆ ತೆಲುಗು ಟೈಟಾನ್ಸ್ ಪಾಲಾದ ಪವನ್ ಸೆರಾವತ್

ಸಮಗ್ರ ನ್ಯೂಸ್: ಭಾರತ ಕಬಡ್ಡಿ ತಂಡದ ನಾಯಕ ಪವನ್ ಸೆಹ್ರಾವತ್ ಈ ಬಾರಿಯೂ ಪ್ರೊ ಕಬಡ್ಡಿ ಲೀಗ್‌ನ (ಪಿಕೆಎಲ್‌) ಅತಿ ದುಬಾರಿ ಆಟಗಾರನೆಂಬ ದಾಖಲೆ ಬರೆದರು. ಸೋಮವಾರ ರಾತ್ರಿ ಆರಂಭವಾದ ಲೀಗ್‌ 10ನೇ ಸೀಸನ್‌ಗೆ ನಡೆದ ಹರಾಜಿನಲ್ಲಿ ತೆಲುಗು ಟೈಟನ್ಸ್‌ ತಂಡ ಈ ಅನುಭವಿ ಆಟಗಾರರನ್ನು ಪೈಪೋಟಿಯ ನಡುವೆ ₹ 2.60 ಕೋಟಿ ಮೊತ್ತಕ್ಕೆ ತನ್ನದಾಗಿಸಿಕೊಂಡಿತು. ಇರಾನ್‌ನ ಆಲ್‌ರೌಂಡರ್‌ ಮೊಹಮ್ಮದ್‌ರೇಜಾ ಶಾಡ್ಲೊಯಿ ಚಿಯೆನಾ ಹರಾಜಿನ ಆರಂಭದಲ್ಲಿ ₹2.35 ಕೋಟಿ ಮೊತ್ತಕ್ಕೆ ಪುಣೇರಿ ಪಲ್ಟನ್ಸ್‌ ತಂಡದ ಪಾಲಾಗಿ ದಾಖಲೆ

ಪ್ರೊ ಕಬಡ್ಡಿ ಲೀಗ್; ದುಬಾರಿ‌‌ ಮೊತ್ತಕ್ಕೆ ತೆಲುಗು ಟೈಟಾನ್ಸ್ ಪಾಲಾದ ಪವನ್ ಸೆರಾವತ್ Read More »

ಇಸ್ರೇಲ್ ನಿಂದ ಮರಳಲು ನಿರಾಕರಿಸಿದ ಉಡುಪಿ ಮೂಲದ ನರ್ಸ್

ಸಮಗ್ರ ನ್ಯೂಸ್: ಇಸ್ರೇಲ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಮರಳಿ ಕರೆತರಲು ಸಿದ್ಧತೆ ಭರದಿಂದ ಸಾಗಿದೆ. ಹಲವರನ್ನು ಸುರಕ್ಷಿತವಾಗಿ ಕರೆತರಲಾಗಿದೆ. ಈ ನಡುವೆ ಉಡುಪಿಯ ನರ್ಸ್‌ವೊಬ್ಬರು ದೇಶಕ್ಕೆ ಮರಳಲು ನಿರಾಕರಿಸಿದ್ದಾರೆ. ‘ಭಾರತ ನನಗೆ ಜನ್ಮ ನೀಡಿತು, ಇಸ್ರೇಲ್ ಜೀವ ನೀಡಿತು; ಕಷ್ಟದ ಸಮಯದಲ್ಲಿ ಅವರೊಂದಿಗೆ ನಿಲ್ಲುತ್ತೇನೆ’ ಎಂದು ಇಸ್ರೇಲ್‌ನ ಟೆಲ್ ಅವಿವ್-ಯಾಫೊದಲ್ಲಿದ್ದು, ನರ್ಸ್‌ ಆಗಿ ಕಾರ್ಯನಿರ್ವಹಿಸುತ್ತಿರುವ ಪ್ರಮೀಳಾ ಪ್ರಭು ಹೇಳಿದ್ದಾರೆ. ಅಕ್ಟೋಬರ್ 7 ರಂದು ಇಸ್ರೇಲ್‌ನಲ್ಲಿ ರಾತ್ರಿ 8.30ರ ಸುಮಾರಿಗೆ ದಾಳಿ ಆರಂಭವಾಗಿತ್ತು. ಸೈರನ್ ಮೊಳಗುವುದನ್ನು ಕೇಳಿದ ಅವರು, ತಮ್ಮ

ಇಸ್ರೇಲ್ ನಿಂದ ಮರಳಲು ನಿರಾಕರಿಸಿದ ಉಡುಪಿ ಮೂಲದ ನರ್ಸ್ Read More »

ಹವಾಮಾನ ವರದಿ| ರಾಜ್ಯದ ಈ ಜಿಲ್ಲೆಗಳಲ್ಲಿ ಅ. ೧೦ರಿಂದ ಮೂರು ದಿನ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮಳೆ ವಾತಾವರಣ ಕಂಡು ಬಂದಿದೆ. ಅಕ್ಟೋಬರ್ 10ರಿಂದ ಮೂರು ದಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಮತ್ತು ರಾಮಗನರ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದ್ದು, ಹಳದಿ ಎಚ್ಚರಿಕೆ ನೀಡಲಾಗಿದೆ. ಇದೇ ಭಾಗದ ಉಳಿದ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ತುಮಕೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆ ಆಗುವ ಸಾಧ್ಯತೆಗಳು ಇವೆ ಎನ್ನಲಾಗಿದೆ. ಕರಾವಳಿ ಜಿಲ್ಲೆಗಳಾದ

ಹವಾಮಾನ ವರದಿ| ರಾಜ್ಯದ ಈ ಜಿಲ್ಲೆಗಳಲ್ಲಿ ಅ. ೧೦ರಿಂದ ಮೂರು ದಿನ ಭಾರೀ ಮಳೆ ಸಾಧ್ಯತೆ Read More »

ಈ ಉದ್ಯೋಗಕ್ಕೆ ಬೇಗ ಅಪ್ಲೆ ಮಾಡಿ, ತಿಂಗಳಿಗೆ 32,000 ಸಂಬಳ!

ಸಮಗ್ರ ಉದ್ಯೋಗ: National Institute of Mental Health and Neuro Sciences ಜಾಬ್ ಆಫರ್ ಮಾಡಿದೆ. ಒಟ್ಟು 1 ಜೂನಿಯರ್ ರಿಸರ್ಚ್​ ಫೆಲೋ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 18, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿ ಇಲ್ಲೀದೆ. Education:ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಲೆಕ್ಟ್ರಿಕಲ್

ಈ ಉದ್ಯೋಗಕ್ಕೆ ಬೇಗ ಅಪ್ಲೆ ಮಾಡಿ, ತಿಂಗಳಿಗೆ 32,000 ಸಂಬಳ! Read More »

ವಿಶ್ವ ಮಾನಸಿಕ ಆರೋಗ್ಯ ದಿನ ಅಕ್ಟೋಬರ್ 10

ಸಮಗ್ರ ನ್ಯೂಸ್: ಪ್ರತಿ ವರ್ಷ ಅಕ್ಟೋಬರ್ 10ರಂದು ವಿಶ್ವ ಮಾನಸಿಕ ಆರೋಗ್ಯ ದಿನ ಎಂದು ವಿಶ್ವಾದಾದ್ಯಂತ ಆಚರಿಸಿ ಜನರಲ್ಲಿ “ಮಾನಸಿಕ ಆರೋಗ್ಯದ ಅನಿವಾರ್ಯತೆ” ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ವಿಶ್ವ ಮಾನಸಿಕ ಸಂಸ್ಥೆ ಮಾಡುತ್ತದೆ. 2018 ರಲ್ಲಿ “ಯುವ ಜನರು ಮತ್ತು ಬದಲಾಗುತ್ತಿರುವ ಜಗತ್ತಿನಲ್ಲಿ ಮಾನಸಿಕ ಆರೋಗ್ಯ” ಎಂಬ ತಿರುಳನ್ನು ಇಟ್ಟುಕೊಂಡು ಆಚರಣೆ ಮಾಡಲಾಗಿದೆ. 2019ರಲ್ಲಿ “ಮಾನಸಿಕ ಆರೋಗ್ಯ ಮತ್ತು ಆತ್ಮಹತ್ಯೆ ತಡೆಯುವಿಕೆ’’ ಎಂಬ ಧ್ಯೇಯ ವಾಕ್ಯದೊಂದಿಗೆ ಆಚರಣೆ ಮಾಡಲಾಗುತ್ತಿದೆ. ಈ ಆಚರಣೆಯನ್ನು ಮೊದಲ ಬಾರಿಗೆ 1992

ವಿಶ್ವ ಮಾನಸಿಕ ಆರೋಗ್ಯ ದಿನ ಅಕ್ಟೋಬರ್ 10 Read More »

ಬೆಂಗಳೂರು: ಬಿಎಂಟಿಸಿ ಬಸ್ ಹರಿದು ಮೂರು ವರ್ಷದ ಮಗು ಬಲಿ

ಸಮಗ್ರ ನ್ಯೂಸ್:ಬೈಕ್‌ಗೆ ಹಿಂಬದಿಯಿಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂರು ವರ್ಷದ ಮಗು ಸ್ಥಳದಲ್ಲೇ ಸಾವನ್ನಪಿರುವ ಘಟನೆ ಬೆಂಗಳೂರಿನ ಗಾರೇಪಾಳ್ಯ ಜಂಕ್ಷನ್‌ನಲ್ಲಿ ನಡೆದಿದೆ. ಅಪಘಾತದಲ್ಲಿ ಅಯಾನ್ (3) ಬೆಂಗಳೂರಿನ ಗಾರೇಪಾಳ್ಯ ಜಂಕ್ಷನಲ್ಲಿ ಅ. 8ರಂದು ಬೈಕ್‌ನಲ್ಲಿ ಮನೆಗೆ ಹೋಗುತ್ತಿದ್ದ ಸಂದರ್ಭ ಹಿಂಬಂದಿಯಿಂದ ಬೈಕ್‌ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿದೆ. ಪರಿಣಾಮ ಹಿಂಬದಿಯಲ್ಲಿ ಕುಳಿತಿದ್ದ ಮಗು ಕೆಳಗಡೆ ಬಿದ್ದಿದೆ. ಮಗು ಕೆಳಗಡೆ ಬೀಳುತ್ತಿದ್ದಂತೆ ಬಿಎಂಟಿಸ್ ಬಸ್ಸಿನ ಚಕ್ರ ಮಗುವಿನ ಮೇಲೆ ಹರಿದಿದೆ. ಘಟನೆಯಿಂದ ಮೂರು ವರ್ಷದ ಗಂಡು ಮಗು

ಬೆಂಗಳೂರು: ಬಿಎಂಟಿಸಿ ಬಸ್ ಹರಿದು ಮೂರು ವರ್ಷದ ಮಗು ಬಲಿ Read More »