October 2023

ಏಷ್ಯನ್ ಗೇಮ್ಸ್ ವಿಜೇತರ ಜೊತೆ ಮೋದಿ ಸಂವಾದ

ಸಮಗ್ರ ನ್ಯೂಸ್: 19ನೇ ಏಷ್ಯನ್ ಗೇಮ್ಸ್ ನಲ್ಲಿ ಅಮೋಘ ಸಾಧನೆ ಮಾಡಿ, ಪದಕಗಳ ಶತಕ ಬಾರಿಸಿದ ಭಾರತದ ಅಥ್ಲೆಟ್‌ಗಳ ಜೊತೆ ನಾಳೆ‌ ಪ್ರಧಾನಿ ಮೋದಿ ಸಂವಾದ ನಡೆಸಲಿದ್ದಾರೆ. ನಾಳೆ‌ ಅಕ್ಟೋಬರ್ 10ರಂದು ದೆಹಲಿಯ ಮೇಜರ್ ಧ್ಯಾನ್ ಚಂದ್ ಕ್ರೀಡಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಚೀನಾದಲ್ಲಿ ನಡೆದ ಏಷ್ಯನ್ ಗೇಮ್ಸ್ ನಲ್ಲಿ ಭಾರತವು 107 ಪದಕಗಳನ್ನು ಗೆಲ್ಲುವುದರೊಂದಿಗೆ ಮೊದಲ ಬಾರಿಗೆ ನೂರು ಪದಕಗಳನ್ನು ಗಳಿಸಿದ ಹೊಸದೊಂದು ದಾಖಲೆಯನ್ನು ನಿರ್ಮಿಸಿತ್ತು. 28 ಚಿನ್ನದ ಪದಕ, 38 ಬೆಳ್ಳಿಯ ಪದಕ ಮತ್ತು […]

ಏಷ್ಯನ್ ಗೇಮ್ಸ್ ವಿಜೇತರ ಜೊತೆ ಮೋದಿ ಸಂವಾದ Read More »

ಅಯೋಧ್ಯೆಯಲ್ಲಿ ಶ್ರೀರಾಮನಿಗೆ ಪಟ್ಟಾಭಿಷೇಕ/ ರಾಮನ ಅಕ್ಷತೆ ವಿತರಣೆ

ಸಮಗ್ರ ನ್ಯೂಸ್: ಆಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ, ಶ್ರೀರಾಮನಿಗೆ ಸಮರ್ಪಣೆಯಾಗಲಿರುವ ಅಕ್ಷತೆಯನ್ನು ದೇಶಾದ್ಯಂತ ವಿತರಿಸಲು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನಿರ್ಧರಿಸಿದೆ. ದಸರಾ ಸಂಭ್ರಮಾಚರಣೆಯ ಬಳಿಕ ಅಯೋಧ್ಯೆಯಲ್ಲಿ ಅಕ್ಷತಾ ಪೂಜೆಯನ್ನು ನೆರವೇರಿಸಲಾಗುತ್ತದೆ. ಬಳಿಕ ವಿಶ್ವ ಹಿಂದೂ ಪರಿಷತ್‍ನ ಸ್ವಯಂಸೇವಕರು ಅಯೋಧ್ಯೆಗೆ ಬಂದು ಅಕ್ಷತೆಯನ್ನು ಕೊಂಡೊಯ್ಯುತ್ತಾರೆ. ನಂತರ ಅದನ್ನು ದೇಶದ ವಿವಿಧ ಭಾಗಗಳಲ್ಲಿ ಹಂಚುವ ಕುರಿತು ನಿರ್ಧರಿಸಲಾಗುತ್ತದೆ. ಜನವರಿ 1 ರಿಂದ 15ರವರೆಗೆ ಅಕ್ಷತೆಯನ್ನು ವಿತರಿಸಲಾಗುತ್ತದೆ ಎಂದು ಟ್ರಸ್ಟ್ ತಿಳಿಸಿದೆ.

ಅಯೋಧ್ಯೆಯಲ್ಲಿ ಶ್ರೀರಾಮನಿಗೆ ಪಟ್ಟಾಭಿಷೇಕ/ ರಾಮನ ಅಕ್ಷತೆ ವಿತರಣೆ Read More »

ರಾಜಸ್ಥಾನದಲ್ಲಿ ನವೆಂಬರ್ 23ರಂದು ಚುನಾವಣೆ/ ಬಿಜೆಪಿ ಮೊದಲ ಪಟ್ಟಿ ಸಿದ್ಧ

ಸಮಗ್ರ ನ್ಯೂಸ್: ಪಂಚರಾಜ್ಯಗಳ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದ್ದು, ರಾಜಸ್ಥಾನದಲ್ಲಿ ನವೆಂಬರ್ 23 ರಂದು ಒಂದು ಹಂತದಲ್ಲಿ ಚುನಾವಣೆ ನಡೆಯಲಿದೆ. ಹೀಗಾಗಿ ರಾಜಸ್ಥಾನದಲ್ಲಿ ಬಿಜೆಪಿ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಘೋಷಿಸಿದೆ. 41 ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಲಾಗಿದೆ. ಈ ಪಟ್ಟಿಯಲ್ಲಿ ರಾಜಸ್ಥಾನದಿಂದ ಲೋಕಸಭೆಗೆ ಆಯ್ಕೆಯಾಗಿರುವ 7 ಸಂಸದರಿಗೆ ಟಿಕೆಟ್ ನೀಡಲಾಗಿದೆ. ರಾಜಸ್ಥಾನದ ಪ್ರಮುಖ 7 ಸಂಸದರು ವಿಧಾನಸಭೆ ಸ್ಪರ್ಧಿಸಿ ಬಿಜೆಪಿ ಅಧಿಕಾರಕ್ಕೆ ತರುವ ಹೊಣೆ ಹೊತ್ತುಕೊಂಡಿದ್ದಾರೆ.ಸಂಸದ ರಾಜ್ಯವರ್ಧನ್ ರಾಥೋಡ್ ಜೋತ್ವಾರ ಕ್ಷೇತ್ರದಿಂದ , ಸಂಸದೆ ದಿವ್ಯ ಕುಮಾರ್

ರಾಜಸ್ಥಾನದಲ್ಲಿ ನವೆಂಬರ್ 23ರಂದು ಚುನಾವಣೆ/ ಬಿಜೆಪಿ ಮೊದಲ ಪಟ್ಟಿ ಸಿದ್ಧ Read More »

ಸುಳ್ಯ:ಬಸ್ ಹತ್ತಲು ಯತ್ನಿಸಿದ ಪ್ರಯಾಣಿಕ ಆಯತಪ್ಪಿ ಬಿದ್ದು ಚಿಕಿತ್ಸೆ ಫಲಿಸದೆ ಸಾವು

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಬಸ್ ಹತ್ತಲು ಯತ್ನಿಸಿ ವ್ಯಕ್ತಿಯೊಬ್ಬರು ರಸ್ತೆಗೆ ಎಸೆಯಲ್ಪಟ್ಡು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಸುಳ್ಯ ಆಲೆಟ್ಟಿ ಕ್ರಾಸ್ ಬಳಿ ನಡೆದಿದೆ. ಆಲೆಟ್ಟಿ ಗ್ರಾಮದ ಕೂಳಿಯಡ್ಕ ಕರುಣಾಕರ ಅವರು ಸುಳ್ಯ ಆಲೆಟ್ಟಿ ಕ್ರಾಸ್ ಬಳಿ ಖಾಸಗಿ ಬಸ್ ಹತ್ತಲು ಹೋದಾಗ ಬಸ್ಸಿನ ಬಾಗಿಲು ತಳ್ಳಲ್ಪಟ್ಟು ರಸ್ತೆಗೆ ಆಯತಪ್ಪಿ ಬಿದ್ದಿದ್ದಾರೆ. ಪರಿಣಾಮ ಗಂಭೀರ ಗಾಯಗೊಂಡ ಅವರನ್ನು ಸ್ಥಳೀಯರು ಚಿಕಿತ್ಸೆಗೆ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆ ಬಳಿಕ ಮನೆಯಲ್ಲೇ ಮರುದಿನ ಮುಂಜಾನೆ ಸಮಸ್ಯೆ ಉಲ್ಬಣವಾದ

ಸುಳ್ಯ:ಬಸ್ ಹತ್ತಲು ಯತ್ನಿಸಿದ ಪ್ರಯಾಣಿಕ ಆಯತಪ್ಪಿ ಬಿದ್ದು ಚಿಕಿತ್ಸೆ ಫಲಿಸದೆ ಸಾವು Read More »

ರಾಜ್ಯ ಸರ್ಕಾರ ಶೀಘ್ರ ಪತನ; ಡಿಕೆಶಿ ತಿಹಾರ್ ಜೈಲಿಗೆ| ಮಾಜಿ ಸಿಎಂ ಕುಮಾರಸ್ವಾಮಿ ಭವಿಷ್ಯ

ಸಮಗ್ರ ನ್ಯೂಸ್: ಕಾಂಗ್ರೆಸ್ ಸರ್ಕಾರ ಶೀಘ್ರದಲ್ಲೇ ಪತನಗೊಳ್ಳಲಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಮತ್ತೆ ತಿಹಾರ್ ಜೈಲಿಗೆ ಹೋಗುವ ಕಾಲ ಸನ್ನಿಹಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ಭಾನುವಾರ ಭವಿಷ್ಯ ನುಡಿದಿದ್ದಾರೆ. ರಾಮನಗರ ಜಿಲ್ಲೆಯ ಬಿಡದಿಯ ಕೇತಗಾನಹಳ್ಳಿಯಲ್ಲಿ ಪಕ್ಷದ ಮುಖಂಡರ ಜೊತೆಗಿನ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಜೊತೆಗಿನ ಮೈತ್ರಿ ಸರ್ಕಾರದ ಪತನಕ್ಕೆ ಡಿಕೆ ಶಿವಕುಮಾರ್ ಕಾರಣ ಎಂದು ಆರೋಪಿಸಿದರು. ಜೋಡೆತ್ತು ಎಂದು ಬಲವಂತವಾಗಿ ನನ್ನ ಕೈ ಮೇಲೆತ್ತಿ ಒಳಗೊಳಗೆ ರಾಜಕೀಯ ಮಾಡಿ ಸರ್ಕಾರವನ್ನು ಬೀಳಿಸಿದರು.

ರಾಜ್ಯ ಸರ್ಕಾರ ಶೀಘ್ರ ಪತನ; ಡಿಕೆಶಿ ತಿಹಾರ್ ಜೈಲಿಗೆ| ಮಾಜಿ ಸಿಎಂ ಕುಮಾರಸ್ವಾಮಿ ಭವಿಷ್ಯ Read More »

ಸಹಕಾರಿ ಕ್ಷೇತ್ರದ ಗಣಕೀಕರಣ/ ಭರ್ಜರಿ ಅನುದಾನ ನೀಡಿದ ಕೇಂದ್ರ ಸರ್ಕಾರ

ಸಮಗ್ರ ನ್ಯೂಸ್: ಗ್ರಾಮೀಣ ಆರ್ಥಿಕ ಚಟುವಟಿಕೆಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಸಹಕಾರಿ ಕ್ಷೇತ್ರಗಳ ಅಭಿವೃದ್ಧಿಗೆ ಕೇಂದ್ರ ಸರಕಾರ ಮುಂದಾಗಿದ್ದು, ಕೃಷಿ ಮತ್ತು ಗ್ರಾಮೀಣ ಸಹಕಾರಿ ಸಂಘಗಳ ಕಂಪ್ಯೂಟರೀಕರಣಕ್ಕೆ 225.09 ಕೋಟಿ ರೂಪಾಯಿಗಳನ್ನು ನೀಡಲು ಮುಂದಾಗಿದೆ. ದೇಶದ 28 ರಾಜ್ಯಗಳು ಮತ್ತು 8 ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಹಕಾರಿ ಸಂಘಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಕೇಂದ್ರದ ಅನುದಾನ ಇದರ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ.

ಸಹಕಾರಿ ಕ್ಷೇತ್ರದ ಗಣಕೀಕರಣ/ ಭರ್ಜರಿ ಅನುದಾನ ನೀಡಿದ ಕೇಂದ್ರ ಸರ್ಕಾರ Read More »

ಪಂಚರಾಜ್ಯ ಚುನಾವಣೆಗೆ ಮಹೂರ್ತ ಫಿಕ್ಸ್| ಕೇಂದ್ರ ಚು. ಆಯೋಗದಿಂದ ದಿನ‌ ನಿಗದಿ

ಸಮಗ್ರ ನ್ಯೂಸ್: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕವನ್ನು ನಿಗದಿಪಡಿಸಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ರಾಜೀವ್ ಕುಮಾರ್ ಚುನಾವಣಾ ದಿನಾಂಕವನ್ನು ಘೋಷಿಸಿದ್ದಾರೆ. ಮಧ್ಯಪ್ರದೇಶ ಹಾಗೂ ಮಿಜೋರಾಂನಲ್ಲಿ ನವೆಂಬರ್ 7 ರಂದು ಮತದಾನ ನಡೆಯಲಿದೆ, ಛತ್ತೀಸ್ ಗಢದಲ್ಲಿ ನವೆಂಬರ್ 7 ಹಾಗೂ 17ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ, ರಾಜಸ್ಥಾನದಲ್ಲಿ ನವೆಂಬರ್ 23ರಂದು ಹಾಗೂ ತೆಲಂಗಾಣದಲ್ಲಿ ನವೆಂಬರ್ 30ರಂದು ಮತದಾನ ನಡೆಯಲಿದೆ. ಡಿಸೆಂಬರ್ 3ಕ್ಕೆ ಫಲಿತಾಂಶ ಹೊರಬರಲಿದೆ.

ಪಂಚರಾಜ್ಯ ಚುನಾವಣೆಗೆ ಮಹೂರ್ತ ಫಿಕ್ಸ್| ಕೇಂದ್ರ ಚು. ಆಯೋಗದಿಂದ ದಿನ‌ ನಿಗದಿ Read More »

42,000 ಸಂಬಳ ಕೊಡ್ತಾರೆ ಈ ಉದ್ಯೋಗಕ್ಕೆ! ಈ ಕೂಡಲೇ ಅಪ್ಲೇ ಮಾಡಿ

ಸಮಗ್ರ ಉದ್ಯೋಗ: Central Food Technological Research Institute ಹೈರಿಂಗ್​ ಮಾಡ್ತಾ ಇದೆ. ಒಟ್ಟು ಒಂದು ರಿಸರ್ಚ್​ ಅಸೋಸಿಯೇಟ್-1 ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 11, 2023 ಕೊನೆಯ ದಿನವಾಗಿದೆ. ಇನ್ನಷ್ಟು ಈ ಜಾಬ್​ ಕುರಿತಾದ ಮಾಹಿತಿ ಇಲ್ಲಿದೆ ನೋಡಿ. Education: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ

42,000 ಸಂಬಳ ಕೊಡ್ತಾರೆ ಈ ಉದ್ಯೋಗಕ್ಕೆ! ಈ ಕೂಡಲೇ ಅಪ್ಲೇ ಮಾಡಿ Read More »

ಸುಮಲತಾಗೆ ಕೈ ಕೊಡ್ತಾ ಬಿಜೆಪಿ ಹೈಕಮಾಂಡ್?

ಸಮಗ್ರ ನ್ಯೂಸ್: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡಿದ್ದ ಸುಮಲತಾ ಅಂಬರೀಶ್ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದರು. ಆದರೆ ಮೈತ್ರಿ ಘೋಷಣೆ ಬಳಿಕ ಬಿಜೆಪಿ ನಾಯಕರು ಸುಮಲತಾ ಅವರಿಂದ ಅಂತರ ಕಾಯ್ದುಕೊಳ್ಳುತ್ತಿರೋದು ಕಂಡು ಬರುತ್ತಿದೆ.ಬಿಜೆಪಿಗೆ ಬೆಂಬಲ ಕೊಟ್ಟಿದ್ದ ಸುಮಲತಾ ಅಂಬರೀಶ್​​​ಗೆ ಮುಂದಿನ ರಾಜಕೀಯ ಭವಿಷ್ಯದ ಟೆನ್ಷನ್ ಶುರುವಾಗಿದೆ. ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಮಂಡ್ಯದಿಂದ ಸ್ಪರ್ಧೆ ಮಾಡಲು ಸುಮಲತಾ ಪ್ಲಾನ್ ಮಾಡಿಕೊಂಡಿದ್ದರು. ಆದ್ರೆ ಮೈತ್ರಿ ಬಳಿಕ ಎಲ್ಲವೂ ಬದಲಾಗಿದೆ. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಅಂತರಿಕ

ಸುಮಲತಾಗೆ ಕೈ ಕೊಡ್ತಾ ಬಿಜೆಪಿ ಹೈಕಮಾಂಡ್? Read More »

ಕನ್ನಡ, ಇಂಗ್ಲಿಷ್ ಟೀಚರ್ ಆಗಲು ಇಷ್ಟ ಪಡ್ತೀರಾ? ತಿಂಗಳಿಗೆ 40,000 ಸಂಬಳ ಕೊಡ್ತಾರೆ!

ಸಮಗ್ರ ಉದ್ಯೋಗ: University of Agriculture Sciences Dharwad ಖಾಲಿ ಇರುವ ಹುದ್ದೆಗಳಿಗೆ ಜನರನ್ನು ಆಹ್ವಾನಿಸುತ್ತಿದೆ. ಗುತ್ತಿಗೆ ಆಧಾರದ ಮೇಲೆ 3 ಶಿಕ್ಷಕ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ. ಆಸಕ್ತರು ಈಗಲೇ ಅಪ್ಲೈ ಮಾಡಿ. ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಇದೇ ಅಕ್ಟೋಬರ್ 18, 2023 ರಂದು ಬೆಳಗ್ಗೆ 11 ಗಂಟೆಗೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಇನ್ನಷ್ಟು ಈ ಕುರಿತಾದ ಮಾಹಿತಿ ಇಲ್ಲಿದೆ ನೋಡಿ. Job

ಕನ್ನಡ, ಇಂಗ್ಲಿಷ್ ಟೀಚರ್ ಆಗಲು ಇಷ್ಟ ಪಡ್ತೀರಾ? ತಿಂಗಳಿಗೆ 40,000 ಸಂಬಳ ಕೊಡ್ತಾರೆ! Read More »