Ad Widget .

ಮಲೆಯಾಳಂ ಚಿತ್ರರಂಗಕ್ಕೆ ಮತ್ತೊಂದು ಶಾಕ್| ನಟಿ ಡಾ. ಪ್ರಿಯಾ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ನಟಿ ರೆಂಜೂಷಾ ಮೆನನ್ ಅವರ ನಿಧನದ ಆಘಾತದಿಂದ ಹೊರಬರುವ ಮುನ್ನವೇ ಮತ್ತೊಂದು ಸಾವಿನ ಸುದ್ದಿ ಮಲಯಾಳಂ ಕಿರುತೆರೆ ಉದ್ಯಮವನ್ನು ಬೆಚ್ಚಿಬೀಳಿಸಿದೆ. ಕರುತಮುತ್ತು ಮುಂತಾದ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದ ನಟಿ ಡಾ. ಪ್ರಿಯಾ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.

Ad Widget . Ad Widget .

ಪ್ರಿಯಾ ಅವರಿಗೆ 35 ವರ್ಷ ವಯಸ್ಸಾಗಿತ್ತು. ಹೃದಯಾಘಾತದಿಂದ ಅವರು ಮಂಗಳವಾರ (ಅಕ್ಟೋಬರ್ 31) ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ಎಂಟು ತಿಂಗಳ ಗರ್ಭಿಣಿಯಾಗಿದ್ದರು. ಅಗಲಿದ ಆತ್ಮಕ್ಕೆ ಶ್ರದ್ಧಾಂಜಲಿ ಸಲ್ಲಿಸಿದ ನಟ ಕಿಶೋರ್ ಸತ್ಯ ಅಭಿಮಾನಿಗಳೊಂದಿಗೆ ಸುದ್ದಿ ಹಂಚಿಕೊಂಡಿದ್ದಾರೆ.

Ad Widget . Ad Widget .

ಹೃದಯಾಘಾತದಿಂದ ಡಾ. ಪ್ರಿಯಾ ಕೊನೆಯುಸಿರೆಳೆದಿದ್ದಾರೆ. ಅವರು ಎಂಟು ತಿಂಗಳ ಗರ್ಭಿಣಿಯಾಗಿದ್ದರು. ನವಜಾತ ಶಿಶುವನ್ನು ಐಸಿಯುನಲ್ಲಿ ಇಡಲಾಗಿದೆ. ಪ್ರಿಯಾಗೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ. ತಮ್ಮ ದಿನನಿತ್ಯದ ಚೆಕಪ್ ಗಾಗಿ ಆಸ್ಪತ್ರೆಗೆ ಬಂದಿದ್ದ ಅವರಿಗೆ ಹೃದಯ ಸ್ತಂಭನವಾಗಿದೆ. ಕುಟುಂಬಕ್ಕೆ ಹೇಗೆ ಸಾಂತ್ವಾನ ಹೇಳಲಿ ಎಂದು ತಿಳಿಯುತ್ತಿಲ್ಲ ಎಂದು ನಟ ಕಿಶೋರ್ ಸತ್ಯ ದುಃಖ ಹಂಚಿಕೊಂಡಿದ್ದಾರೆ.

ಡಾ. ಪ್ರಿಯಾ ಮಲಯಾಳಂ ಕಿರುತೆರೆಯಲ್ಲಿ ಜನಪ್ರಿಯತೆ ಪಡೆದಿದ್ದರು. ಕಿಶೋರ್ ಅವರ ಜೊತೆ ಕರುತಮುತ್ತು ಕಾರ್ಯಕ್ರಮದಲ್ಲಿ ಅಭಿನಯಿಸಿದ್ದರು. ಮದುವೆ ಬಳಿಕ ಕಿರುತೆರೆ ಉದ್ಯಮದಿಂದ ಕೊಂಚ ಬ್ರೇಕ್ ಪಡೆದುಕೊಂಡಿದ್ದರು. ಅಷ್ಟೇ ಅಲ್ಲ ಪ್ರಿಯಾ ಅವರು ವೃತ್ತಿಯಲ್ಲಿ ವೈದ್ಯೆಯಾಗಿದ್ದರು.

Leave a Comment

Your email address will not be published. Required fields are marked *