Ad Widget .

ಕನ್ನಡ ನಾಡನ್ನು ಕಟ್ಟಿದ್ದು ಹೇಗೆ? ಮೈಸೂರು ರಾಜ್ಯ ಕರ್ನಾಟಕವಾದ ಕಥೆ…

ಸಮಗ್ರ ವಾರ್ತೆ: ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ 1 ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) 1956 ರ ನವೆಂಬರ್ 1ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಇತಿಹಾಸ

Ad Widget . Ad Widget . Ad Widget .

ಕನ್ನಡದ ಕುಲಪುರೋಹಿತರಾದ ಆಲೂರು ವೆಂಕಟರಾಯರು, ಕರ್ನಾಟಕ ಏಕೀಕರಣ ಚಳುವಳಿಯನ್ನು 1905 ರಲ್ಲಿ ಪ್ರಾರಂಭಿಸಿದರು. 1950ರಲ್ಲಿ, ಭಾರತವು ಗಣರಾಜ್ಯವಾದ ನಂತರ ಭಾರತದ ವಿವಿಧ ಪ್ರಾಂತ್ಯಗಳು, ಭಾಷೆಗಳ ಆಧಾರದ ಮೇಲೆ ರಾಜ್ಯಗಳಾಗಿ ರೂಪ ಗೊಂಡವು. ಈ ಹಿಂದೆ ರಾಜರ ಆಳ್ವಿಕೆಯಲ್ಲಿ ದಕ್ಷಿಣ ಭಾರತದಲ್ಲಿ ಹಲವಾರು ಸಂಸ್ಥಾನಗಳನ್ನು ಒಳಗೊಂಡಂತೆ ರಾಜ್ಯಗಳು ರೂಪುಗೊಂಡಿದ್ದವು. ಕನ್ನಡ ಮಾತನಾಡುವ ಪ್ರಾಂತ್ಯಗಳು ಸೇರಿ, ಮೈಸೂರು ರಾಜ್ಯವು ಉದಯವಾಯಿತು.

ಕನ್ನಡ ಧ್ವಜ:
1956 ರ ನವೆಂಬರ್ 1 ರಂದು, ಮದ್ರಾಸ್, ಮುಂಬಯಿ, ಹೈದರಬಾದ್ ಪ್ರಾಂತ್ಯದ ಕನ್ನಡ ಮಾತನಾಡುವ ಪ್ರದೇಶಗಳು ವಿಲೀನಗೊಂಡು ಮೈಸೂರು ರಾಜ್ಯ ಉದಯವಾಯಿತು ಹಾಗೂ ಉತ್ತರ ಕರ್ನಾಟಕ, ಮಲೆನಾಡು ಮತ್ತು ಹಳೆಯ ಮೈಸೂರು ಎಂಬುದಾಗಿ ಹೊಸದಾಗಿ ರೂಪು ಗೊಂಡ ಮೈಸೂರು ರಾಜ್ಯವನ್ನು ಮೂರು ಪ್ರದೇಶಗಳಲ್ಲಿ ಗುರುತಿಸಲಾಯಿತು.

ಹೊಸದಾಗಿ ಏಕೀಕೃತಗೊಂಡ ರಾಜ್ಯದ ಆರಂಭದಲ್ಲಿ ಹೊಸ ಘಟಕದ ಕೋರ್ ರೂಪುಗೊಂಡು ಮುಂಚಿನ ರಾಜ್ಯದ ಹೆಸರು ಇರಲೆಂದು “ಮೈಸೂರು” ಹೆಸರನ್ನು ಉಳಿಸಿಕೊಂಡರು. ಆದರೆ ಉತ್ತರ ಕರ್ನಾಟಕದ ಜನರ ತರ್ಕ ಮಾನ್ಯತೆಗಾಗಿ, ರಾಜ್ಯದ ಹೆಸರು ನವೆಂಬರ್ 1, 1973 ರಂದು “ಕರ್ನಾಟಕ” ಎಂದು ಬದಲಾಯಿತು.

ರಾಜ್ಯೋತ್ಸವ ದಿನವನ್ನು ಕರ್ನಾಟಕ ರಾಜ್ಯಾದ್ಯ೦ತ ಮಹದಾನ೦ದ ಮತ್ತು ಚಟುವಟಿಕೆಯಿಂದ ಆಚರಿಸಲಾಗುತ್ತದೆ. ಕೆಂಪು ಮತ್ತು ಹಳದಿ ಕನ್ನಡ ಧ್ವಜಗಳು ರಾಜ್ಯದ ಎಲ್ಲೆಡೆ ಹಾರಿಸಲ್ಪಡುತ್ತವೆ. ಕನ್ನಡ ನಾಡಗೀತೆ (“ಜಯ ಭಾರತ ಜನನಿಯ ತನುಜಾತೆ”)ಯನ್ನು ಹಾಡಲಾಗುತ್ತದೆ. ಸರ್ಕಾರಿ ಕಚೇರಿ ಮತ್ತು ಹಲವಾರು ಪ್ರಮುಖ ಪ್ರದೇಶಗಳಲ್ಲಿ ವಾಹನಗಳ ಮೇಲೆ ಭುವನೇಶ್ವರಿ ಚಿತ್ರವನ್ನಿಟ್ಟು ಮೆರವಣಿಗೆ ನಡೆಸಲಾಗುತ್ತದೆ.

ರಾಜ್ಯೋತ್ಸವವನ್ನು ಕರ್ನಾಟಕದಲ್ಲಿರುವ ಬಹುತೇಕ ಹಿಂದೂಗಳು, ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ಧರ್ಮಬೇಧವಿಲ್ಲದೆ ಆಚರಿಸುತ್ತಾರೆ ಹಾಗೂ ಸರ್ಕಾರ ಮೆರವಣಿಗೆ ಆಟೋ ರಿಕ್ಷಾಗಳು ಮತ್ತು ಇತರೆ ವಾಹನಗಳು ಕನ್ನಡ ಧ್ವಜದ ಬಣ್ಣಗಳಾದ ಕೆಂಪು ಮತ್ತು ಹಳದಿ ವರ್ಣಗಳ ಬಾವುಟ ದೊಂದಿಗೆ ಅಲಂಕರಿಸಲಾಗಿರುತ್ತವೆ. ರಾಜ್ಯ ಸರ್ಕಾರ ಕರ್ನಾಟಕ ರಾಜ್ಯೋತ್ಸವದ ದಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಪ್ರಶಸ್ತಿ ಪ್ರಕಟ ಪಡಿಸಲಾಗುತ್ತದೆ.

ರಾಜ್ಯೋತ್ಸವದ ಪ್ರಯುಕ್ತ ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿಶ್ವದಾದ್ಯಂತ ಹಮ್ಮಿಕೊಳ್ಳಲಾಗುತ್ತದೆ. ರಾಜ್ಯದ ಮುಖ್ಯಮಂತ್ರಿ ಸಾಧಕರಿಗೆ ಈ ಪ್ರಶಸ್ತಿಯನ್ನು ವಿತರಿಸುತ್ತಾರೆ.

ಕನ್ನಡಾಂಬೆಗೆ ನುಡಿ ನಮನ:
ಕರ್ನಾಟಕಕ್ಕೆ 50 ರ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಈ ಬಾರಿ ವಿಶೇಷವಾಗಿ ಈ ನಾಡಿನ ಹೆಸರಾಂತ 05 ಕವಿಗಳು ರಚಿಸಿರುವ ಗೀತೆಗಳನ್ನು ರಾಜ್ಯೋತ್ಸವ ಸಮಾರಂಭದಲ್ಲಿ ಕಡ್ಡಾಯವಾಗಿ ಹಾಡುವ ಮೂಲಕ ನುಡಿ ನಮನ ಸಲ್ಲಿಸಲು ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ. ಇದರನ್ವಯ ಹುಯಿಲಗೋಳ ನಾರಾಯಣರಾಯರು ರಚಿಸಿರುವ “ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು”, ಕುವೆಂಪು ರಚಿತ “ಎಲ್ಲಾದರು ಇರು ಎಂತಾದರು ಇರು”, ದ.ರಾ.ಬೇಂದ್ರ ರಚಿಸಿರುವ “ಒಂದೇ ಒಂದೇ ಕರ್ನಾಟಕ ಒಂದೇ”, ಸಿದ್ದಯ್ಯ ಪುರಾಣಿಕರು ರಚಿಸಿರುವ “ಹೊತ್ತಿತೋ ಹೊತ್ತಿತು ಕನ್ನಡದ ದೀಪ”, ಹಾಗೂ ಚನ್ನವೀರ ಕಣವಿ ಅವರು ಬರೆದಿರುವ “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಎಂಬ 05 ಗೀತೆಗಳನ್ನು ಕಡ್ಡಾಯವಾಗಿ ಹಾಡುವಂತೆ ಸೂಚನೆ ನೀಡಲಾಗಿದೆ.

Leave a Comment

Your email address will not be published. Required fields are marked *