Ad Widget .

ಬಿಹಾರದ ಸರಯೂ ನದಿಯಲ್ಲಿ ದೋಣಿ ದುರಂತ| 15 ಮಂದಿ ನಾಪತ್ತೆ; 4 ಶವ ಪತ್ತೆ

ಸಮಗ್ರ ನ್ಯೂಸ್: ಬಿಹಾರದ ಛಪ್ರಾದಲ್ಲಿ ದೋಣಿ ಮಗುಚಿ ನಾಲ್ವರು ಸಾವನ್ನಪ್ಪಿದ್ದು 15 ಜನ ಕಾಣೆಯಾಗಿರುವ ಘಟನೆ ನಡೆದಿದೆ. ಇಲ್ಲಿಯ ಸರಯೂ ನದಿಯಲ್ಲಿ 15ಕ್ಕೂ ಹೆಚ್ಚಿನ ಪ್ರಯಾಣಿಕರು ತುಂಬಿದ್ದ ದೋಣಿ ಪಲ್ಟಿಯಾಗಿದೆ.

Ad Widget . Ad Widget .

ಘಟನೆಯಲ್ಲಿ ಇದುವರೆಗೆ ನಾಲ್ವರ ಮೃತದೇಹಗಳು ಪತ್ತೆಯಾಗಿವೆ. ಇನ್ನೂ 14 ಮಂದಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಕೆಲವರು ಈಜಿ ದಡ ಸೇರಿದ್ದಾರೆ. ಮಾಂಝಿ ಪೊಲೀಸ್ ಠಾಣೆ ವ್ಯಾಪ್ತಿಯ ಮಥಿಯಾರ್ ಎಂಬಲ್ಲಿ ಈ ಘಟನೆ ನಡೆದಿದೆ. ನಾಪತ್ತೆಯಾಗಿರುವವರ ಪತ್ತೆಗಾಗಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

Ad Widget . Ad Widget .

ರೈತರು ಹಾಗೂ ಕೂಲಿ ಕಾರ್ಮಿಕರು ಹೊಲದಲ್ಲಿ ಕೆಲಸ ಮಾಡಲು ತೆರಳಿ ಸಂಜೆ ಸಮಯ ದೋಣಿಯಲ್ಲಿ ವಾಪಸ್​ ಆಗುತ್ತಿದ್ದರು ಈ ವೇಳೆ ದುರ್ಘಟನೆ ಸಂಭವಿಸಿದೆ. ದೋಣಿ ಮಗುಚಿದ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸ್​ ಪಡೆ ಮತ್ತು ಸಮೀಪದ ಗ್ರಾಮಗಳ ಜನರು ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್ ತಂಡಗಳೂ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಘಟನಾ ಸ್ಥಳದಲ್ಲೇ ಎಸ್ಪಿ ಮೊಕ್ಕಾಂ ಹೂಡಿದ್ದಾರೆ.

ಮೃತರ ಗುರುತು ಪತ್ತೆ: ಘಟನೆಯಲ್ಲಿ ಮೃತಪಟ್ಟವರ ಗುರುತು ಪತ್ತೆಹಚ್ಚಲಾಗಿದೆ. ಫೂಲ್ ಕುಮಾರಿ ದೇವಿ, ತಾರಾ ದೇವಿ, ರಮಿತಾ ಕುಮಾರಿ, ಪಿಂಕಿ ಕುಮಾರಿ ಮೃತರು. ಕಾಣೆಯಾದವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.

Leave a Comment

Your email address will not be published. Required fields are marked *