ಎಮ್ಮೆಕೆರೆ ಈಜುಕೊಳ ಉದ್ಘಾಟನೆಗೆ ಸಿಎಂ ಸಿದ್ಧರಾಮಯ್ಯ/ ಮೂರು ದಿನಗಳ ಮಾಸ್ಟರ್ಸ್ ಸ್ವಿಮ್ಮಿಂಗ್ ಚಾಂಪಿಯನ್‍ಷಿಪ್

ಸಮಗ್ರ ನ್ಯೂಸ್: ಸ್ಮಾರ್ಟ್‍ಸಿಟಿ ಯೋಜನೆಯ ಅಡಿಯಲ್ಲಿ ಮಂಗಳೂರಿನ ಎಮ್ಮೆಕೆರೆಯಲ್ಲಿ ನಿರ್ಮಾಣವಾಗಿರುವ ನೂತನ ಈಜುಕೊಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನವೆಂಬರ್ 24ರಂದು ಉದ್ಘಾಟನೆ ಮಾಡಲಿದ್ದಾರೆ. ಸುಮಾರು 30 ಕೋಟಿ ವೆಚ್ಚದಲ್ಲಿ ಈ ಈಜುಕೊಳವನ್ನು ನಿರ್ಮಾಣ ಮಾಡಲಾಗಿದೆ.

. Ad Widget . Ad Widget

ಉದ್ಘಾಟನೆಯ ನಂತರ ಮೂರು ದಿನಗಳ ಕಾಲ ಇಲ್ಲಿ 19ನೇ ಮಾಸ್ಟರ್ಸ್ ಸ್ವಿಮ್ಮಿಂಗ್ ಚಾಂಪಿಯನ್‍ಷಿಪ್ ನಡೆಯಲಿದೆ. ರಾಷ್ಟ್ರೀಯ ಮಾನ್ಯತಾ ಮಂಡಳಿ ಇದಕ್ಕೆ ಅಂತಾರಾಷ್ಟ್ರೀಯ ಮಟ್ಟದ ಪ್ರಮಾಣ ಪತ್ರವನ್ನು ನೀಡಲಿದ್ದು, ಮೂರು ವರ್ಷಗಳ ಕಾಲ ಇದರ ನಿರ್ವಹಣೆಯನ್ನು ಈಜುಕೊಳ ನಿರ್ಮಾಣ ಮಾಡಿದವರೇ ನೋಡಿಕೊಳ್ಳಲಿದ್ದಾರೆ.

. Ad Widget . . Ad Widget . Ad Widget

Leave a Comment

Your email address will not be published. Required fields are marked *