Ad Widget .

ಉತ್ತರ ಭಾರತದಲ್ಲಿ ಪ್ರಬಲ ಭೂಕಂಪ| 69 ಮಂದಿ ಸಾವು, ಅಪಾರ ಹಾನಿ

ಸಮಗ್ರ ನ್ಯೂಸ್: ನೇಪಾಳ ಮತ್ತು ಉತ್ತರ ಭಾರತದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಸುಮಾರು 20 ರಿಂದ 40 ಸೆಕೆಂಡುಗಳ ಕಾಲ ಭೂಕಂಪನದ ಅನುಭವವಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಭೂಕಂಪದ ಕೇಂದ್ರಬಿಂದು ನೇಪಾಳದಲ್ಲಿ ಕಂಡು ಬಂದಿದೆ. ಭೂಮಿಯ ತೀವ್ರ ಕಂಪನದಿಂದಾಗಿ ಜನರಲ್ಲಿ ಭೀತಿ ಉಂಟಾಗಿದ್ದು, ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಬಹಳ ಸಮಯದವರೆಗೆ ನಡುಕ ಅನುಭವಿಸಿದ್ದೇವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

Ad Widget . Ad Widget . Ad Widget .

ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 6.4 ಎಂದು ತಿಳಿದುಬಂದಿದೆ. ಅಷ್ಟೇ ಅಲ್ಲ, ಪಶ್ಚಿಮ ನೇಪಾಳದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದಾಗಿ ಕನಿಷ್ಠ 69 ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಭಾರತ-ನೇಪಾಳ ಗಡಿಯಲ್ಲಿರುವ ಕತಿಹಾರ್, ಮೋತಿಹಾರಿ ಮತ್ತು ಇತರ ಹಲವು ಜಿಲ್ಲೆಗಳಲ್ಲಿ ಕಂಪನದ ಅನುಭವವಾಗಿದೆ.

ದೆಹಲಿ-ಎನ್‌ಸಿಆರ್, ಯುಪಿ, ಬಿಹಾರ, ಉತ್ತರಾಖಂಡ ಮತ್ತು ಹರಿಯಾಣ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಭೂಕಂಪನದಿಂದಾಗಿ ಭೂಮಿ ನಡುಗಿದೆ. ಇದರ ತೀವ್ರತೆ ಹೆಚ್ಚಿದ್ದು, ಜನರು ಭಯಭೀತರಾಗಿದ್ದಾರೆ. ಈ ದಿಢೀರ್ ಭೂಕಂಪದಿಂದಾಗಿ ಜನರು ಮನೆಯಿಂದ ಹೊರಗೆ ಬಂದಿದ್ದಾರೆ. ಹೈ ರೈಸ್ ಸೊಸೈಟಿಯ ಅಸೆಂಬ್ಲಿ ಪ್ರದೇಶದಲ್ಲೂ ಜನರು ಆತಂಕಕ್ಕೊಳಾಗಿರುವುದು ಕಂಡು ಬಂದಿದೆ.

ರಾತ್ರಿ 11.32ರ ವೇಳೆಗೆ ಭೂಕಂಪನದ ಅನುಭವವಾಗಿದೆ. ಜನರು ಊಟ ಮಾಡಿ ಮಲಗಲು ತಯಾರಿ ನಡೆಸುತ್ತಿದ್ದ ಸಮಯದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ನಂತರ ಜನರು ತಮ್ಮ ಮನೆಗಳಿಂದ ಹೊರ ಓಡಿ ಬಂದಿದ್ದಾರೆ. ಬಳಿಕ ಜನರು ಸಾಮಾಜಿಕ ಮಾಧ್ಯಮದಲ್ಲಿ ಭೂಕಂಪದ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಮನೆಯ ಮತ್ತು ರಸ್ತೆ ದೀಪಗಳು ಹಾಗೂ ಸೀಲಿಂಗ್ ಫ್ಯಾನ್ ಅಲುಗಾಡುತ್ತಿರುವುದನ್ನು ಸ್ಪಷ್ಟವಾಗಿ ಕಾಣಬಹುದಾಗಿದೆ.

ಪಶ್ಚಿಮ ನೇಪಾಳದಲ್ಲಿ ಸಂಭವಿಸಿದ ಭಾರೀ ಭೂಕಂಪದಿಂದಾಗಿ ಇಲ್ಲಿಯವರೆಗೆ 69 ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೂಕಂಪದಿಂದ ಹಲವು ಮನೆಗಳು ಧ್ವಂಸಗೊಂಡಿವೆ. ರುಕುಮ್ ವೆಸ್ಟ್‌ನಲ್ಲಿ 35 ಜನರು ಸಾವನ್ನಪ್ಪಿದ್ದಾರೆ ಎಂದು ನೇಪಾಳಿ ಅಧಿಕಾರಿಗಳು ದೃಢಪಡಿಸಿದ್ದಾರೆ, ಜಜರ್ಕೋಟ್ ಜಿಲ್ಲೆಯಲ್ಲಿ ಇದುವರೆಗೆ 34 ಜನರು ಸಾವನ್ನಪ್ಪಿದ್ದಾರೆ. ಭೂಕಂಪದ ನಂತರ ರಕ್ಷಣಾ ಪಡೆ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ.

Leave a Comment

Your email address will not be published. Required fields are marked *