ಮಡಿಕೇರಿ: ಲಾರಿ ಡಿಕ್ಕಿಯಾಗಿ ಪಲ್ಟಿಯಾದ ಕಾರು

ಸಮಗ್ರ ನ್ಯೂಸ್:ಬೆಂಗಳೂರಿನಿಂದ ಮಡಿಕೇರಿಯತ್ತ ತೆರಳುತ್ತಿದ್ದ ಕಾರಿಗೆ ಇಬ್ಬನಿ ರೆಸಾರ್ಟ್ ಸಮೀಪ ಮಡಿಕೇರಿ ಕಡೆಯಿಂದ ಬರುತ್ತಿದ್ದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಪ್ರವಾಸಿಗರಿದ್ದ ಕಾರು ಪಲ್ಟಿಯಾದ ಘಟನೆ ಸಂಭವಿಸಿದೆ.

Ad Widget ... ..

ಲಾರಿ ಅಪ್ಪಳಿಸಿದ ರಭಸಕ್ಕೆ ಕಾರು ರಸ್ತೆ ಬದಿಯಲ್ಲಿ ಮಗುಚಿಕೊಂಡಿದೆ. ವೃದ್ದರೊಬ್ಬರ ಸಮೇತ ಕಾರಿನಲ್ಲಿದ್ದ ದಂಪತಿ ಮತ್ತು ಇಬ್ಬರು ಪುಟ್ಟ ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಮಡಿಕೇರಿಯಲ್ಲಿರುವ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

Ad Widget

Leave a Comment

Your email address will not be published. Required fields are marked *