Ad Widget .

ಕಡಬ: ಗಂಡ-ಹೆಂಡತಿ ಜಗಳ ವಿಷಸೇವನೆಯಲ್ಲಿ ಅಂತ್ಯ| ಪತ್ನಿ‌ ಸಾವು; ಪತಿ ಸ್ಥಿತಿ ಚಿಂತಾಜನಕ

ಸಮಗ್ರ ನ್ಯೂಸ್: ಗಂಡ-ಹೆಂಡತಿ ಜಗಳ ಉಂಡು ಮಲಗುವ ತನಕ ಅನ್ನುತ್ತಾರೆ. ಆದರೆ ಇಲ್ಲಿ ಗಂಡ –ಹೆಂಡತಿ ಜಗಳ ವಿಪರೀತ ಮಟ್ಟಕ್ಕೆ ತಿರುಗಿ ಸಾವಿನಲ್ಲಿ ಅಂತ್ಯವಾಗಿದೆ. ಈ ಘಟನೆ ದ.ಕ ಜಿಲ್ಲೆಯ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಚಾಪೆಲ್ಲ ಎಂಬಲ್ಲಿ ನ.04ರಂದು ಸಂಜೆ ನಡೆದಿದ್ದು, ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget . Ad Widget .

ಇಲ್ಲಿನ ನಿವಾಸಿಗಳಾದ ಸಂಜೀವ ಮತ್ತು ಕುಸುಮ ದಂಪತಿ ನಡುವೆ ನಡುವೆ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು. ಶನಿವಾರ ಕೂಡ ಮಾತಿಗೆ ಮಾತು ಬೆಳೆದಿದೆ. ಕೋಪದ ಭರದಲ್ಲಿ ಇಬ್ಬರು ಕೂಡ ವಿಷ ಸೇವಿಸಿದ್ದಾರೆ.

Ad Widget . Ad Widget .

ಈ ವಿಚಾರ ಸ್ಥಳೀಯರಿಗೆ ತಿಳಿದು ತಕ್ಷಣ ಅವರ ಸಂಬಂಧಿಕರಿಗೆ ವಿಚಾರವನ್ನು ತಿಳಿಸಿರುತ್ತಾರೆ. ಅವರು ಬಂದು ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸುವ ಪ್ರಯತ್ನದಲ್ಲಿದ್ದಾಗ ಕುಸುಮ ತನ್ನ ಪ್ರಾಣವನ್ನು ಕಳೆದುಕೊಂಡಿದ್ದಾಗಿ ತಿಳಿದುಬಂದಿದೆ. ಸಂಜೀವ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿ ಚಿಕಿತ್ಸೆ ಕೊಡಲಾಗುತ್ತಿದ್ದು, ಸ್ಥಿತಿ‌ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *