ಸಮಗ್ರ ಉದ್ಯೋಗ: Mangalore Refinery and Petrochemicals Limited ಹೈರಿಂಗ್ ಮಾಡ್ತಾ ಇದೆ. ಒಟ್ಟು 1 ಡೆಪ್ಯುಟಿ ಜನರಲ್ ಮ್ಯಾನೇಜರ್ (ಸೆಕ್ರೆಟೇರಿಯಲ್) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್ 7, 2023 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಇನ್ನಷ್ಟು ಮಾಹಿತಿ ನಿಮಗಾಗಿ.
Age:
ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನವೆಂಬರ್ 6, 2023ಕ್ಕೆ ಗರಿಷ್ಠ 46 ವರ್ಷ ಮೀರಿರಬಾರದು.
Education:
ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಇನ್‌ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾದ ಸಹಾಯಕ ಸದಸ್ಯತ್ವವನ್ನು ಪೂರ್ಣಗೊಳಿಸಿರಬೇಕು.
Application Fees:
SC/ST/PwBD/ಮಾಜಿ ಸೈನಿಕ ಅಭ್ಯರ್ಥಿಗಳು/ MRPLನ ನಿಯಮಿತ ಉದ್ಯೋಗಿಗಳು: ಅರ್ಜಿ ಶುಲ್ಕ ಇಲ್ಲ
ಸಾಮಾನ್ಯ/OBC (NCL)/EWS ಅಭ್ಯರ್ಥಿಗಳು: ರೂ.118/-
ಪಾವತಿ ವಿಧಾನ: ಚಲನ್
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Salary:
ಮಾಸಿಕ ₹ 1,20,000-2,80,000
ಉದ್ಯೋಗದ ಸ್ಥಳ: ಮಂಗಳೂರು
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಜನರಲ್ ಮ್ಯಾನೇಜರ್ (HR)
ನೇಮಕಾತಿ ವಿಭಾಗ
ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್
ಕುಥೆತ್ತೂರ್ ಪೋಸ್ಟ್
ಮಂಗಳೂರು-575030
ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆಯ ದಿನ: ನವೆಂಬರ್ 7, 2023. ರಾಜ್ಯ ಸರ್ಕಾರದ ಉದ್ಯೋಗ ಬೇಕೆನ್ನುವವರು ಈಗಲೇ ಅರ್ಜಿ ಹಾಕಿ.