Ad Widget .

15 ದಿನದೊಳಗೆ ಬ್ಯಾಂಕ್​​ ಖಾತೆಗೆ ಗೃಹಲಕ್ಷ್ಮೀ ಹಣ ಬರಲಿದೆ

ಸಮಗ್ರ ಸಮಾಚಾರ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಗೃಹ ಲಕ್ಷ್ಮಿ ಯೋಜನೆಯಡಿ ಅರ್ಜಿ ಸಲ್ಲಿಸಿದವರಲ್ಲಿ ಕೆಲವರಿಗೆ ಒಂದು ಬಾರಿ ಹಣ ಬಂದಿದ್ದರೆ ಇನ್ನು ಕೆಲವರಿಗೆ ಇದುವರೆಗೆ ಹಣವೇ ಬಂದಿಲ್ಲ. ಅರ್ಜಿ ಸಲ್ಲಿಸಲು ಹೋದರೆ ಹತ್ತಾರು ದಾಖಲೆ ಕೇಳುತ್ತಾರೆ, ಅದು ಸರಿ ಇಲ್ಲ, ಬದಲಾಯಿಸಿಕೊಂಡು ಬನ್ನಿ ಎನ್ನುತ್ತಾರೆ ಎಂದು ಮಹಿಳೆಯರು ಆರೋಪಿಸುತ್ತಿದ್ದರು.

Ad Widget . Ad Widget .

ಕಳೆದ ಮೂರು ತಿಂಗಳುಗಳಿಂದ ಗೃಹ ಲಕ್ಷ್ಮಿ ಯೋಜನೆಯ ಲಾಭ ಪಡೆಯಲು ರಾಜ್ಯದ 1.2 ಕೋಟಿ ಗೃಹಿಣಿಯರು ನೋಂದಾಯಿಸಿಕೊಳ್ಳುತ್ತಿದ್ದಾರೆ. ಆದರೆ ಯೋಜನೆ ಅನುಷ್ಠಾನಗೊಂಡು ಮೂರು ತಿಂಗಳು ಕಳೆದರೂ ಕೂಡ ಶೇಕಡಾ 30ರಷ್ಟು ಕೂಡ ಅರ್ಹ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಮಾಸಿಕ 2,000 ರೂಪಾಯಿ ಹಣ ಜಮಾ ಆಗುತ್ತಿಲ್ಲ. ಅರ್ಹ ಮಹಿಳೆಯರಿಗೆ ಹಣ ಏಕೆ ಜಮಾ ಆಗುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿದೆ.

Ad Widget . Ad Widget .

ಇನ್ನು 15 ದಿನದೊಳಗೆ ಅರ್ಹ ಫಲಾನುಭವಿಗಳ ಬ್ಯಾಂಕ್​​ ಖಾತೆಗೆ ಗೃಹಲಕ್ಷ್ಮೀ ಹಣ ಬರಲಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ಮಹಿಳೆಯರ ಖಾತೆಗೆ ಹಣ ಹೋಗಿಲ್ಲ. ಹೀಗಾಗಿ ಇಂದು ತಾಂತ್ರಿಕ ಸಮಸ್ಯೆಗಳ ಕುರಿತು ಮಾಹಿತಿ ಪಡೆದಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

ಬೆಂಗಳೂರಿನ ಮಲ್ಲೇಶ್ವರದಲ್ಲಿ ಬೆಂಗಳೂರು ಒನ್ ಕೇಂದ್ರಕ್ಕೆ ಭೇಟಿ ನೀಡಿ ‌ಯೋಜನೆ ನೋಂದಣಿ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ನಂತರ ಪ್ರತಿ ಜಿಲ್ಲೆಯಿಂದಲೂ ಮಾಹಿತಿ ಪಡೆದರು. ಬ್ಯಾಂಕ್ ಖಾತೆಯಲ್ಲಿ ಸಮಸ್ಯೆ ಇದ್ದರೆ ಅಂಚೆ ಕಚೇರಿಯಲ್ಲಿ ಖಾತೆ ತೆರೆದು ಹಣವನ್ನು ನೇರವಾಗಿ ಅಂಚೆ ಖಾತೆಗೆ ಜಮಾ ಮಾಡಲಾಗುತ್ತದೆ. ಹೀಗಾಗಿ ರಾಜ್ಯದ ಮಹಿಳೆಯರು ಅಂಚೆ ಇಲಾಖೆಯಲ್ಲಿ ಖಾತೆ ತೆರೆಯುವಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ರಾಜ್ಯ ಗೃಹಿಣಿಯರಿಗೆ ಮಾಹಿತಿ ನೀಡಿದ್ದಾರೆ. ಅಂಚೆ ಇಲಾಖೆಯಲ್ಲಿ ಖಾತೆ ತೆರೆದರೆ ಅರ್ಹ ಗೃಹಿಣಿಯರ ಖಾತೆಗೆ ಒಟ್ಟಾಗಿ 6,000 ರೂಪಾಯಿ ಜಮಾ ಆಗಲಿದೆ ಎಂದು ಆಶ್ವಾಸನೆ ನೀಡಿದರು.

Leave a Comment

Your email address will not be published. Required fields are marked *