Ad Widget .

ಹವಾಮಾನ ವರದಿ| ಹಿಂಗಾರು ಮಳೆ ಚುರುಕು| ಮುಂದಿನ ಮೂರು ದಿನ ಉತ್ತಮ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಹಿಂಗಾರು ಚುರುಕುಗೊಂಡಿದ್ದು, ಮುಂದಿನ ಮೂರು ದಿನ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Ad Widget . Ad Widget .

‘ಕಳೆದ ಮೂರು ದಿನದಿಂದ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಜಿಲ್ಲೆ ಹಾಗೂ ಉತ್ತರ ಒಳನಾಡಿನ ಎರಡು ಜಿಲ್ಲೆಗಳಾದ ಗದಗ ಹಾಗೂ ಹಾವೇರಿಯಲ್ಲಿ ಭಾರೀ ಮಳೆಯಾಗಲಿರುವುದರಿಂದ ಈ ಜಿಲ್ಲೆಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ’ ಎಂದು ಮಾಹಿತಿ ನೀಡಿದೆ.

Ad Widget . Ad Widget .

ಈಗಾಗಲೇ ಬರದಿಂದ ಕಂಗೆಟ್ಟಿದ್ದ ಭತ್ತ ಬೆಳೆಯುವ ಪ್ರದೇಶಗಳಾದ ರಾಜ್ಯದ ದಾವಣಗೆರೆ, ರಾಯಚೂರು, ಉತ್ತರ ಕನ್ನಡ, ಕೊಪ್ಪಳದ ರೈತರು ಈ ದಿಢೀರ್‌ ಮಳೆಯಿಂದಾಗಿ ಆತಂಕಕ್ಕೆ ಒಳಗಾಗಿದ್ದಾರೆ. ಕಳೆದ ಎರಡ್ಮೂರು ದಿನಗಳಿಂದ ಮಳೆಯಿಂದಾಗಿ ಈ ಭಾಗದಲ್ಲಿ ಸುಮಾರು 500 ಎಕ್ರೆಗೂ ಹೆಚ್ಚು ಪ್ರದೇಶದಲ್ಲಿ ಕಟಾವಿಗೆ ಬಂದಿದ್ದ ಭತ್ತದ ಬೆಳೆ ಹಾನಿಯಾಗಿದೆ.

ಬಿಸಿಲಿಂದ ಕಂಗೆಟ್ಟಿದ್ದ ಬೆಂಗಳೂರು, ಚಿಕ್ಕಬಳ್ಳಾಪುರ, ಮಂಡ್ಯ, ಕೊಪ್ಪಳ, ಕಲಬುರಗಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿದ್ದ ಮಳೆ ಮುಂದುವರಿದಿದ್ದು, ಕೋಲಾರ, ದಕ್ಷಿಣ ಕನ್ನಡದ ಕೆಲವೆಡೆ ಸಾಧಾರಣ ಮಳೆ ಸುರಿದಿದೆ. ಬೆಂಗಳೂರು, ಮಂಡ್ಯದಲ್ಲಂತೂ ಸುಮಾರು ಎರಡ್ಮೂರು ಗಂಟೆಗಳ ಕಾಲ ಸುರಿದ ಮಳೆಯಿಂದಾಗಿ ಜನಜೀವನ ಕೆಲಕಾಲ ಅಸ್ತವ್ಯಸ್ತಗೊಂಡಿತ್ತು. ಮಂಡ್ಯದ ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣಕ್ಕೆ ನೀರು ನುಗ್ಗಿ ಪ್ರಯಾಣಿಕರು ಪರದಾಡಿದರೆ, ಬೆಂಗಳೂರಿನಲ್ಲಿ ವಾಹನ ಸಂಚಾರರು ಸಮಸ್ಯೆ ಎದುರಿಸಬೇಕಾಯಿತು. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮಚ್ಚೇರಿ ಕೋಡಿಹಳ್ಳಿಯಲ್ಲಿ ಸೋಮವಾರ ರಾತ್ರಿ ಮನೆ ಗೋಡೆ ಕುಸಿದು ಲಚ್ಚಾನಾಯ್ಕ (80) ಎಂಬವರು ಮೃತಪಟ್ಟಿದ್ದಾರೆ.

Leave a Comment

Your email address will not be published. Required fields are marked *