ಸಮಗ್ರ ಸಮಾಚಾರ: ನವೆಂಬರ್ 28ರಂದು ಸೇವಾದಳ ನೂರು ವರ್ಷಗಳನ್ನು ಪೂರೈಸಲಿದ್ದು, ಈ ಹಿನ್ನಲೆಯಲ್ಲಿ ದೇಶಾದ್ಯಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕಾಂಗ್ರೆಸ್ ಸಿದ್ದತೆ ನಡೆಸುತ್ತಿದೆ. ಇದೇ ತಿಂಗಳ 09ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯಮಟ್ಟದ ಸಮಾವೇಶ ನಡೆಸಲು ರಾಜ್ಯ ಕಾಂಗ್ರೆಸ್ ಸಿದ್ದತೆ ನಡೆಸುತ್ತಿದೆ.
ಈ ಕುರಿತು ಪತ್ರಕರ್ತರೊಂದಿಗೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ನವೆಂಬರ್ 09ರಂದು ಸೇವಾದಳದ ರಾಜ್ಯಮಟ್ಟದ ಸಮಾವೇಶ ನಡೆಸಲಾಗುವುದು. ರಾಷ್ಟ್ರೀಯ ಸೇವಾದಳದ ಅಧ್ಯಕ್ಷ ಧ್ವಜಾರೋಹಣ ನಡೆಸಲಿದ್ದು, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಮಾವೇಶದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ ಸೇವಾದಳದ 3000 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.




























