Ad Widget .

ಬಿಗ್ ನ್ಯೂಸ್ ನೀಡಿದ ಡಿ. ವಿ. ಸದಾನಂದ ಗೌಡ/ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಗೌಡರು

ಸಮಗ್ರ ನ್ಯೂಸ್: ಸುಳ್ಯದ ಮಣ್ಣಿನ ಮಗ, ಬಿಜೆಪಿಯ ಹಿರಿಯ ನಾಯಕ ಡಿ. ವಿ. ಸದಾನಂದ ಗೌಡ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಪಕ್ಷದಿಂದ ಗರಿಷ್ಠ ಲಾಭ ಪಡೆದಿದ್ದೇನೆ. ಇನ್ನೂ ಹೆಚ್ಚಿನದಕ್ಕೆ ಆಸೆ ಪಡುವುದಿಲ್ಲ ಎಂದು ಪತ್ರಕರ್ತರೊಂದಿಗೆ ಸದಾನಂದ ಗೌಡರು ಹೇಳಿದರು.

Ad Widget . Ad Widget .

ನನ್ನ 30 ವರ್ಷಗಳ ರಾಜಕೀಯ ಜೀವನದಲ್ಲಿ ಪಕ್ಷ ನನಗೆ ಎಲ್ಲವನ್ನೂ ನೀಡಿದ್ದು, ಇನ್ನು ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸದೇ ಇರಲು ನಿರ್ಧರಿಸಿದ್ದೇನೆ. 10 ವರ್ಷಗಳ ಶಾಸಕನಾಗಿ, 20 ವರ್ಷ ಸಂಸದನಾಗಿ, ಒಂದು ವರ್ಷ ಮುಖ್ಯಮಂತ್ರಿಯಾಗಿ ಮತ್ತು ಏಳು ವರ್ಷಗಳ ಕಾಲ ಸಂಪುಟ ಸಚಿವನಾಗಿ ಸೇವೆ ಸಲ್ಲಿಸಲು ಪಕ್ಷ ಅವಕಾಶ ನೀಡಿದೆ. ಇದಲ್ಲದೇ 4 ವರ್ಷಗಳ ಕಾಲ ರಾಜ್ಯ ಘಟಕದ ಅಧ್ಯಕ್ಷನಾಗಿ ಪಕ್ಷ ಸಂಘಟನೆ ಮಾಡಿದ್ದೇನೆ. ಇನ್ನೂ ಹೆಚ್ಚು ಆಸೆಪಟ್ಟರೆ, ಜನ ನನ್ನನ್ನು ಸ್ವಾರ್ಥಿ ಎನ್ನುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸದಾನಂದ ಗೌಡರು ಹೇಳಿದರು

Ad Widget . Ad Widget .

ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ತನ್ನ ಚುನಾವಣಾ ಪಯಣ ಆರಂಭಿಸಿರುವ ಸದಾನಂದ ಗೌಡರು, ಪ್ರಸ್ತುತ ಲೋಕಸಭೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. 2021ರಲ್ಲಿ ಕೇಂದ್ರ ಸಚಿವ ಸಂಪುಟ ಪುನಾರಚನೆ ಸಂದರ್ಭದಲ್ಲಿ ಸಚಿವ ಸ್ಥಾನವನ್ನು ತ್ಯಜಿಸಿದ್ದರು.

Leave a Comment

Your email address will not be published. Required fields are marked *